ಆ್ಯಪ್ನಗರ

ಜನರ ಸಹಕಾರದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ

ಶಾಲೆಗೆ ಹೋಗುವ ವಯಸ್ಸಿನ ಮಕ್ಕಳನ್ನು ಕೆಲಸಕ್ಕಿಟ್ಟುಕೊಂಡು ದುಡಿಸಿಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಇಂಥ ಅನಿಷ್ಟ ಪದ್ದತಿಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮುಖ್ಯವಾಗಿರುತ್ತದೆ. ಎಂದು ಸೂಲಿಬೆಲೆ ಪೊಲೀಸ್‌ ಠಾಣೆ ಪಿಸ್ಸೈ ಗೋವಿಂದ್‌ ಹೇಳಿದರು.

Vijaya Karnataka 27 Jun 2019, 2:46 pm
ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
Vijaya Karnataka Web abolition of child labor through cooperation of the people
ಜನರ ಸಹಕಾರದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ


ಸೂಲಿಬೆಲೆ
: ಶಾಲೆಗೆ ಹೋಗುವ ವಯಸ್ಸಿನ ಮಕ್ಕಳನ್ನು ಕೆಲಸಕ್ಕಿಟ್ಟುಕೊಂಡು ದುಡಿಸಿಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಇಂಥ ಅನಿಷ್ಟ ಪದ್ದತಿಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮುಖ್ಯವಾಗಿರುತ್ತದೆ. ಎಂದು ಸೂಲಿಬೆಲೆ ಪೊಲೀಸ್‌ ಠಾಣೆ ಪಿಸ್ಸೈ ಗೋವಿಂದ್‌ ಹೇಳಿದರು.

ಸೂಲಿಬೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಂಗಳೂರಿನ ಚೈಲ್ಡ್‌ ರೈಟ್ಸ್‌ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನು ಕ್ರಮ: ಬಾಲ್ಯ ವಿವಾಹ, ಭ್ರೂಣ ಹತ್ಯೆ, ಬಾಲ ಕಾರ್ಮಿಕ ಪದ್ಧತಿಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಮಾರಕವಾಗಿವೆ. ಇಂಥ ಪದ್ದತಿಗಳ ವಿರುದ್ಧ ಹೋರಾಟ ಮಾಡಬೇಕು. ತಮ್ಮ ಜವಾಬ್ದಾರಿ ಕಳೆಯಲೆಂದು ಎಷ್ಟು ಪೋಷಕರು ಕಡಿಮೆ ವಯಸ್ಸಿಗೆ ಬಾಲ್ಯ ವಿವಾಹಗಳನ್ನು ಮಾಡಲು ಪ್ರಯತ್ನಿಸುತ್ತಾರೆ. ಇದು ತಪ್ಪು. ಬಾಲ್ಯ ವಿವಾಹದಿಂದ ಹೆಣ್ಣಿನ ಮಾನಸಿಕ ಮತ್ತು ದೈಹಿಕವಾಗಿ ಪ್ರಭಾವ ಬೀರಿ ಹುಟ್ಟುವ ಮಕ್ಕಳು ಅಪೌಷ್ಟಿಕತೆಯಿಂದ ಬಳಲು ಸಾಧ್ಯ ಇರುತ್ತದೆ. ಬಾಲ್ಯ ವಿವಾಹಗಳು ಕಂಡು ಬಂದರೇ ಮಾಹಿತಿ ನೀಡಿ. ಸಂಬಂಧಪಟ್ಟವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆ: ಚೈಲ್ಡ್‌ ರೈಟ್ಸ್‌ ಟ್ರಸ್ಟ್‌ ಕಾರ್ಯಕ್ರಮ ಸಂಯೋಜಕ ಟಿ.ವೆಂಕಟೇಶ್‌ ಮಾತನಾಡಿ, ಮಕ್ಕಳು ವಯಸ್ಸಾಗಿ ಮೀರಿದ ಕೆಲಸಗಳನ್ನು ಮಾಡುವುದರಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕವಾಗಿ ಪರಿಣಾಮ ಬೀರಲಿದೆ. ಬಾಲ್ಯ ವಿವಾಹ ಹಾಗೂ ದುಡಿಮೆ ಮಕ್ಕಳ ಹಕ್ಕುಗಳ ಕಾಯಿದೆಯ ಉಲ್ಲಂಘನೆಯಾಗಿದ್ದು ಇಂಥ ಪ್ರಕರಣಗಳು ಕಂಡು ಬಂದರೇ ಉಚಿತ ಸಹಾಯವಾಣಿ 1098 ಕರೆ ಮಾಡಿ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು. ತಪ್ಪಿದಲ್ಲಿ ಮಹಿಳಾ ಸಹಾಯವಾಣಿ, ಸ್ಥಳೀಯ ಪೊಲೀಸ್‌ ಠಾಣೆ ಅಥವಾ ಶಿಕ್ಷ ಕರ ಗಮನಕ್ಕೂ ತರಬಹುದು, ಮಕ್ಕಳ ಹಕ್ಕುಗಳನ್ನು ರಕ್ಷ ಣೆ ಮಾಡುವ ದೃಷ್ಟಿಯಿಂದ ಪ್ರತಿ ಗ್ರಾಪಂನಲ್ಲೂ ಗ್ರಾಮ ಸಭೆಗಳನ್ನು ನಡೆಸಲಾಗುತ್ತಿದೆ. ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುವ ದೃಷ್ಟಿಯಿಂದ ಹಲವು ರೀತಿಯ ಕಾರ್ಯಕ್ರಮಗಳನ್ನು ಸರಕಾರ ಜಾರಿ ಮಾಡಿದೆ. ದೇಶದೆಲ್ಲಡೆ 80 ಲಕ್ಷ , ರಾಜ್ಯದಲ್ಲಿ ಇನ್ನೂ 76 ಸಾವಿರ ಬಾಲ ಕಾರ್ಮಿಕರು ಇದ್ದಾರೆ ಎಂಬ ಅಂಶ ಸಿಕ್ಕಿದೆ ಎಂದರು.

ಗ್ರಾಪಮ ಅಧ್ಯಕ್ಷ ಮರುವೆ ಕೃಷ್ಣಪ್ಪ,ಉಪಾಧ್ಯಕ್ಷ ಮುನಿಕದಿರಪ್ಪ ಮಾತನಾಡಿದರು. ವಿದ್ಯಾರ್ಥಿಗಳು ಬಾಲ ಕಾರ್ಮಿಕ ಪದ್ದತಿ,ಕಾನೂನು ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದರು. ಶಾಲಾ ಶಿಕ್ಷ ಕರು,ಚೈಲ್ಡ್‌ ರೈಟ್ಸ್‌ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ