ಆ್ಯಪ್ನಗರ

ವಕೀಲ ಬಂಡಿವೊಡ್ಡರ್‌ ಕೊಲೆ ಖಂಡಿಸಿ ಕೋರ್ಟ್‌ ಕಲಾಪ ಸ್ಥಗಿತ

ನ್ಯಾಯಾಲಯದ ಕಾರ್ಯಕಲಾಪಗಳನ್ನು ಮುಗಿಸಿ, ಬಳಗನೂರು ಗ್ರಾಮಕ್ಕೆ ಹೋಗುತ್ತಿದ್ದ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ರಾಜ್ಯದ ಪ್ರತಿನಿಧಿಯಾಗಿ ಖಂಡಿಸಲಾಗುತ್ತಿದೆ ಎಂದು ವಕೀಲರ ಸಂಘದ ರಾಜ್ಯ ಪರಿಷತ್‌ ಸದಸ್ಯ ಹರೀಶ್‌ ತಿಳಿಸಿದರು.

Vijaya Karnataka 4 Nov 2018, 3:25 pm
ದೇವನಹಳ್ಳಿ: ನ್ಯಾಯಾಲಯದ ಕಾರ್ಯಕಲಾಪಗಳನ್ನು ಮುಗಿಸಿ, ಬಳಗನೂರು ಗ್ರಾಮಕ್ಕೆ ಹೋಗುತ್ತಿದ್ದ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ರಾಜ್ಯದ ಪ್ರತಿನಿಧಿಯಾಗಿ ಖಂಡಿಸಲಾಗುತ್ತಿದೆ ಎಂದು ವಕೀಲರ ಸಂಘದ ರಾಜ್ಯ ಪರಿಷತ್‌ ಸದಸ್ಯ ಹರೀಶ್‌ ತಿಳಿಸಿದರು.
Vijaya Karnataka Web advocate banddivoddar murder case lawyers boycott court proceedings
ವಕೀಲ ಬಂಡಿವೊಡ್ಡರ್‌ ಕೊಲೆ ಖಂಡಿಸಿ ಕೋರ್ಟ್‌ ಕಲಾಪ ಸ್ಥಗಿತ


ಶಿಂದಗಿ ತಾಲೂಕಿನ ವಕೀಲ ಬಂಡಿವೊಡ್ಡರ್‌ ಬರ್ಬರ ಕೊಲೆ ಮಾಡಿರುವುದನ್ನು ಖಂಡಿಸಿ ಪಟ್ಟಣದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಸಾಂಕೇತಿಕವಾಗಿ ಒಂದು ದಿನದ ಕಲಾಪವನ್ನು ತೊರೆದು ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು.

ಈ ಕೂಡಲೇ ಕೊಲೆ ಆರೋಪಿಗಳನ್ನು ಪೊಲೀಸ್‌ ವರಿಷ್ಠರು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ವಕೀಲರಿಗೆ ಇಂಥ ದುಸ್ಥಿತಿಗಳು ಎದುರಾದರೆ ಸಾಮಾನ್ಯ ಜನರ ಸ್ಥಿತಿ ಹೇಗೆ? ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂಬುದು ತಿಳಿದುಬಂದಿಲ್ಲ ಎಂದು ಹೇಳಿದರು.

ಕಾರ‍್ಯದರ್ಶಿ ಡಿ.ಎಸ್‌.ಪ್ರಭಾಕರ್‌ ಮಾತನಾಡಿ, ಬಂಡಿವೊಡ್ಡರ್‌ ಯಾವುದೇ ಸಿವಿಲ್‌ ಕೇಸಿನಲ್ಲಿ ನ್ಯಾಯಾಲಯದಲ್ಲಿ ವಾದ ಪ್ರತಿವಾದಗಳನ್ನು ಮಾಡಬಾರದು ಎಂದು ಬೆದರಿಕೆ ಹಾಕಿದ್ದರು. ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆಗಳು ನಡೆಯುತ್ತಲೇ ಇವೆ. ಕಕ್ಷಿದಾರರಿಗೆ ನ್ಯಾಯಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ವಕೀಲರಿಗೆ ಈ ರೀತಿಯ ಪರಿಸ್ಥಿತಿಯಾದರೆ ಸಾಮನ್ಯ ಜನರ ಪರಿಸ್ಥಿತಿ ಹೇಗೆ ಎಂಬುದು ತಿಳಿಯುತ್ತಿಲ್ಲ ಎಂದರು.

ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಮೂರ್ತಿ, ಮುನಿರಾಜು, ವೆಂಕಟೇಶ್‌, ಮಾಜಿ ಪ್ರಧಾನ ಕಾರ್ಯದರ್ಶಿ ಮುನಿರಾಜು ಕಾರ್ಯಕಾರಿ ಸದಸ್ಯರು, ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ