ಆ್ಯಪ್ನಗರ

ಜಿಂಕೆ ಮಾಂಸ, ಜಿಂಕೆ ಚರ್ಮ ಸಾಗಿಸುತ್ತಿದ್ದ ಅಪ್ಪ ಮಗ ಪರಾರಿ

ಸಿಬ್ಬಂದಿಯನ್ನು ನೋಡುತ್ತಿದ್ದಂತೆ ತಂದೆ ಮಕ್ಕಳಿಬ್ಬರು ಪರಾರಿಯಾಗಿದ್ದಾರೆ. ಜಿಂಕೆ ಮಾಂಸ, ಜಿಂಕೆ ಚರ್ಮ, ಬೈಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vijaya Karnataka Web 24 Apr 2019, 5:20 pm
ಕನಕಪುರ: ಸಂಗಮ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಮಾಂಸ, ಜಿಂಕೆ ಚರ್ಮ ಸಾಗಿಸುತ್ತಿದ್ದ ಗುಮಾನಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
Vijaya Karnataka Web ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ



ಕನಕಪುರದ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು.

ಕರಿಯಪ್ಪ (55), ಸ್ವಾಮಿ (30) ಎಂಬುವರು 13 ಕೆಜಿ ಜಿಂಕೆ ಮಾಂಸ, ಅಪಾರ ಪ್ರಮಾಣದ ಜಿಂಕೆ ಚರ್ಮ ಸಾಗಿಸುತ್ತಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಸಿಬ್ಬಂದಿಯನ್ನು ನೋಡುತ್ತಿದ್ದಂತೆ ತಂದೆ ಮಕ್ಕಳಿಬ್ಬರು ಪರಾರಿಯಾಗಿದ್ದಾರೆ. ಜಿಂಕೆ ಮಾಂಸ, ಜಿಂಕೆ ಚರ್ಮ, ಬೈಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಅರೆಮ್ಯಾಗಲದೊಡ್ಡಿ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ