ಆ್ಯಪ್ನಗರ

ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿ, ನಾಲ್ವರು ಸ್ಥಳದಲ್ಲೇ ದುರ್ಮರಣ

ಮಹೀಂದ್ರಾ ಜೈಲೊ ಕಾರಿನಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯಲ್ಲೇ ಪಲ್ಟಿಯಾಗಿದ್ದು, ನಾಲ್ವರು ದುರ್ಮರ್ಣಕ್ಕೀಡಾಗಿದ್ದಾರೆ.

Vijaya Karnataka Web 24 Aug 2019, 11:42 am
ಬೆಂಗಳೂರು ಗ್ರಾಮಾಂತರ: ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಉಳಿದ ಐವರು ಗಾಯಗೊಂಡಿದ್ದಾರೆ. ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಒಂಬತ್ತು ಮಂದಿ ನಂದಿಬೆಟ್ಟಕ್ಕೆ ಮಹೀಂದ್ರಾ ಜೈಲೊ ಕಾರಿನಲ್ಲಿ ತೆರಳುತ್ತಿದ್ದಾಗ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಬಳಿ ಕಾರು ಪಲ್ಟಿಯಾಗಿದೆ.
Vijaya Karnataka Web Car Accident 2


ಆವಲಹಳ್ಳಿಯಿಂದ ಕಾರಿನಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದ್ದು, ರಮೇಶ್ (30), ಮಂಜುನಾಥ್ (26), ಅಶೋಕ್ ರೆಡ್ಡಿ (26), ಗೌರಿಶ್ (23) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರೆಲ್ಲರು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದವರಾಗಿದ್ದಾರೆ. ಗಾಯಗೊಂಡಿರುವ ಐದು ಮಂದಿಯನ್ನು ಹೊಸಕೋಟೆ ಮತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ