ಆ್ಯಪ್ನಗರ

ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟ ಶಿಕ್ಷ ಣ

ಪಂಡಿತ್‌ ಜವಹರಲಾಲ್‌ ಅವರ ಜನ್ಮ ದಿನವಾದ ನ.14ನ್ನು ಮಕ್ಕಳ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ನಮ್ಮ ದೇಶದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಮಕ್ಕಳ ಬಗ್ಗೆ ಅಪಾರ ಒಲವು ಹೊಂದಿದ್ದರು. ಈ ನಿಟ್ಟಿನಲ್ಲಿ ಮೊದಲು ವಿದ್ಯಾರ್ಥಿಗಳು, ಗುರುಹಿರಿಯರು ಹಾಗೂ ಶಿಕ್ಷ ಕರಿಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದು ಮುಖ್ಯೋಪಾದ್ಯಯಿನಿ ನಾಗರಾಣಿ ಹೇಳಿದರು.

Vijaya Karnataka 16 Nov 2018, 3:57 pm
ನಂದಗುಡಿ: ಪಂಡಿತ್‌ ಜವಹರಲಾಲ್‌ ಅವರ ಜನ್ಮ ದಿನವಾದ ನ.14ನ್ನು ಮಕ್ಕಳ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ನಮ್ಮ ದೇಶದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಮಕ್ಕಳ ಬಗ್ಗೆ ಅಪಾರ ಒಲವು ಹೊಂದಿದ್ದರು. ಈ ನಿಟ್ಟಿನಲ್ಲಿ ಮೊದಲು ವಿದ್ಯಾರ್ಥಿಗಳು, ಗುರುಹಿರಿಯರು ಹಾಗೂ ಶಿಕ್ಷ ಕರಿಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದು ಮುಖ್ಯೋಪಾದ್ಯಯಿನಿ ನಾಗರಾಣಿ ಹೇಳಿದರು.
Vijaya Karnataka Web education is major step in student life
ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟ ಶಿಕ್ಷ ಣ


ನಂದಗುಡಿ ಹೋಬಳಿಯ ಹೆತ್ತಕ್ಕಿ ಗ್ರಾಪಂ ವ್ಯಾಪ್ತಿಯ ಮಾರಸಂಡ್ರಹಳ್ಳಿಯ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟ ಶಿಕ್ಷ ಣ. ಅದನ್ನು ಸಮರ್ಪಕವಾಗಿ ಪಡೆಯುವುದು ನಿಮ್ಮ ಗುರಿಯಾಗಬೇಕು. ಇನ್ನೂ ಮಕ್ಕಳ ಹಕ್ಕು ಹಾಗೂ ಕರ್ತವ್ಯಗಳ ಕುರಿತು ಅವಲೋಕಿಸಿದಾಗ ಇವುಗಳನ್ನು ಮಕ್ಕಳಿಗೆ ತಿಳಿಸಿಕೊಡುವಲ್ಲಿ ಪೋಷಕರು ಹಾಗೂ ಶಿಕ್ಷ ಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಭವಿಷ್ಯದ ರೂವಾರಿಗಳು. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯ ಒಳಗೊಂಡಂತಹ ಸಂಸ್ಕಾರ ಕಲಿಸಿಕೊಡಬೇಕು. ಪಂಡಿತ್‌ ನೆಹರು ಅವರ ಆದರ್ಶ ಪಾಲನೆ ಮಾಡಬೇಕು. ಇದರಿಂದ ಮುಂದೆ ಮಕ್ಕಳ ಭವಿಷ್ಯ ಸಾಕಾರಗೊಳ್ಳುತ್ತದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಮಾತನಾಡಿ, ಸಮಾಜ ಮತ್ತು ದೇಶದ ಭವಿಷ್ಯ ಯುವ ಸಮುದಾಯದ ಕೈಯಲ್ಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಚೇತನಗಳ ಆದರ್ಶದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ ಈ ಮೂಲಕ ವಿದ್ಯಾರ್ಥಿ ದಿಸೆಯಲ್ಲಿರುವಾಗಲೇ ಇಂತಹ ಗುಣಗಳನ್ನು ಅಳವಡಿಸಿಕೊಂಡು ದೇಶ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕ್ವಿಜ್‌, ಚಿತ್ರಕಲೆ, ಮ್ಯೂಸಿಕಲ್‌ ಚೇರ್‌, ಗಾಯನ ಸ್ಪರ್ಧೆ, ಕಥೆ ಹೇಳುವುದು, ವಾಟರ್‌ ಬಾಟಲ್‌ಗೆ ನೀರು ಹಾಕುವುದು ಮೊದಲಾದ ಸ್ಪರ್ಧೆಯನ್ನು ಆಯೋಜಿಸಿ ಪ್ರಶಸ್ತಿಗಳನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಾಲಾ ಸಿಬ್ಬಂದಿ ವರ್ಗ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ