ಐರಾವತಕ್ಕೆ ಗುದ್ದಿದ ಸ್ಕಾರ್ಪಿಯೋ: ಒಂದೇ ಕುಟುಂಬದ ಐವರ ಸಾವು
ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಬಳಿಕ ಡಿವೈಡರ್ ದಾಟಿ ಎದುರುಗಡೆ ಬರುತ್ತಿದ್ದ ಐರಾವತ್ ಬಸ್ಗೆ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
Vijaya Karnataka Web 5 Mar 2019, 10:13 am
ಬೆಂಗಳೂರು: ಕೆಎಸ್ಆರ್ಟಿಸಿ ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಯಂಟಗಾನಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಬೆಂಗಳೂರಿನ ನಾಯಂಡಹಳ್ಳಿಯ ಪಂತರಪಾಳ್ಯದ ಸ್ಕಾರ್ಪಿಯೋ ಚಾಲಕ ಏಳುಮಲೈ (36), ಗೀತಾ(10), ಕಮಲಾ(35), ಕಿರಣ್(13) ಮತ್ತು ಗಿರಿಧರ್(14) ಮೃತ ದುರ್ದೈವಿಗಳು.
ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಬಳಿಕ ಡಿವೈಡರ್ ದಾಟಿ ಎದುರುಗಡೆ ಬರುತ್ತಿದ್ದ ಐರಾವತ್ ಬಸ್ಗೆ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬಸ್ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.