ಆ್ಯಪ್ನಗರ

ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡಿ

ಮಕ್ಕಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಪೋಲಿಯೊ ಲಸಿಕೆಗಳನ್ನು ಹಾಗೂ ಇಂಜೆಕ್ಷ ನ್‌ಗಳನ್ನು ಹಾಕಿಸಬೇಕು ಮತ್ತು ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಬೇಕು. ಆಗ ಮಕ್ಕಳ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದು ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪಾ ಮಿಕ್ಕಿ ಹೇಳಿದರು.

Vijaya Karnataka 24 Dec 2018, 5:00 am
ತಾವರೆಕೆರೆ: ಮಕ್ಕಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಪೋಲಿಯೊ ಲಸಿಕೆಗಳನ್ನು ಹಾಗೂ ಇಂಜೆಕ್ಷ ನ್‌ಗಳನ್ನು ಹಾಕಿಸಬೇಕು ಮತ್ತು ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಬೇಕು. ಆಗ ಮಕ್ಕಳ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದು ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪಾ ಮಿಕ್ಕಿ ಹೇಳಿದರು.
Vijaya Karnataka Web give nutrition food to children
ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡಿ


ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೈಲನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಆರೋಗ್ಯವಂತ ಶಿಶು (ಮಕ್ಕಳ) ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಗರ್ಭಿಣಿಯರು ಹಾಗೂ ಮಕ್ಕಳ ಪಟ್ಟಿ ತಯಾರಿಸಿ, ಅವರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿ ಹೇಳಬೇಕು. ಜತೆಗೆ ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರೋಟಿನ್‌ಯುಕ್ತ ಆಹಾರ ಸೇವಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ತಿಳಿಸಬೇಕು. ಪ್ರತಿಯೊಬ್ಬರೂ ಶುಚಿತ್ವವನ್ನು ಕಾಪಾಡಿ ಆರೋಗ್ಯವಂತರಾಗಿರಬೇಕು. ಹೆರಿಗೆ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಲ್ಲಿ ಮುಂದಾಗುವಂತಾಗಬೇಕು. ನಗು-ಮಗು ಎಂಬ ಉಚಿತ ಆಂಬ್ಯುಲೆನ್ಸ್‌ ಸೇವೆ ಇದ್ದು ಆರೋಗ್ಯವಂತಹ ಸಮಾಜ ನಿರ್ಮಾಣ ಎಲ್ಲರ ಆದ್ಯ ಕರ್ತವ್ಯ. ಮಕ್ಕಳು ಆರೋಗ್ಯವಂತರಾಗಿದ್ದರೆ, ಮನೆಯೂ ಉತ್ತಮವಾಗಿ ಇರುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಉತ್ತಮ ಆರೋಗ್ಯವಂತ ಹಾಗೂ ಪೋಷಕಾಂಶ ಭರಿತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ‍್ಯಕ್ರಮದಲ್ಲಿ ಗ್ರಾಪಂ ಪಿಡಿಒ ಸುಂದರ್‌, ಮುಖಂಡರಾದ ಮಂಜುನಾಥ್‌, ಲೋಕೇಶ್‌, ಅಂಗನವಾಡಿ ಶಿಕ್ಷ ಕರಾದ ಸುಮಿತ್ರ ಮತ್ತು ಉಮಾ, ಆಶಾ ಕಾರ‍್ಯಕರ್ತರು ಹಾಗೂ ಪೋಷಕರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ