ಆ್ಯಪ್ನಗರ

ಹೊಸಕೋಟೆ ಕ್ಷೇತ್ರದಲ್ಲಿ ಶರತ್, ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ: ಗ್ರಾ. ಪಂ ಸದಸ್ಯನಿಗೆ ಗಾಯ

ಹೊಸಕೋಟೆ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ರು. ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡರ ಬೆಂಬಲಿಗರು ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಗ್ರಾ. ಪಂ ಸದಸ್ಯರೊಬ್ಬರಿಗೆ ಗಾಯವಾಗಿದೆ.

Vijaya Karnataka Web 10 Dec 2019, 12:40 pm
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಮಾಕನಹಳ್ಳಿಯಲ್ಲಿ ಉಪ ಚುನಾವಣೆ ಫಲಿತಾಂಶ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆಯಾಗಿದೆ. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ಗೆ ಗಾಯವಾಗಿದೆ.
Vijaya Karnataka Web hoskote 1


ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ನೂತನ ಶಾಸಕ ಶರತ್‌ ಬಚ್ಚೇಗೌಡ ಗ್ರಾ. ಪಂ. ಸದಸ್ಯರನ್ನು ಹೊಸಕೋಟೆ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸೆಂಬರ್ 7 ರಂದು ನಡೆದ ಉಪ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್‌ ವಿರುದ್ಧ ಸ್ಪರ್ಧಿಸಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ರು. ಈ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಬಿಜೆಪಿ ಹಾಗೂ ಶರತ್ ಬಚ್ಚೇಗೌಡರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿ: ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನಿಸಿಲ್ಲ: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ

ಇದನ್ನೂ ಓದಿ: ಹೊಸಕೋಟೆಯಲ್ಲಿ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಅಭಿಮಾನಿ ಸಾವು

ಹೊಸಕೋಟೆಯಲ್ಲಿ ಪೊಲೀಸರಿಂದ ಚುನಾವಣಾ ಅಕ್ರಮ, ಎಂಟಿಬಿ ಪರ ಸ್ಲಿಪ್‌ ವಿತರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ