ಆ್ಯಪ್ನಗರ

ಕಾಂಗ್ರೆಸ್‌ ಸೇರ್ಪಡೆ ಕುರಿತು ಶೀಘ್ರವೇ ನಿರ್ಧಾರವನ್ನು ಬಹಿರಂಗಪಡಿಸ್ತೀನಿ; ಶರತ್ ಬಚ್ಚೇಗೌಡ

ಗ್ರಾಪಂ ಚುನಾವಣೆಯಲ್ಲಿ ಸ್ವಾಭಿಮಾನಿ ಕಾಂಗ್ರೆಸ್‌ ಹೆಚ್ಚಿನ ಸಂಖ್ಯೆಯಲ್ಲಿ ಜಯ ಗಳಿಸಿದ ಕಾರಣ ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಕಾಂಗ್ರೆಸ್‌ ಸೇರ್ಪಡೆ ವಿಚಾರದ ಕುರಿತು ಶೀಘ್ರವೇ ಬಹಿರಂಗ ಪಡಿಸಲಾಗುವುದು ಎಂದು ಶರತ್‌ ಬಚ್ಚೇಗೌಡ ಹೇಳಿದರು.

Vijaya Karnataka Web 22 Jan 2021, 11:59 am
ಜಡಿಗೇನಹಳ್ಳಿ: ಕಾಂಗ್ರೆಸ್‌ ಸೇರ್ಪಡೆ ವಿಚಾರದ ಕುರಿತು ಶೀಘ್ರವೇ ಬಹಿರಂಗ ಪಡಿಸಲಾಗುವುದು ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದ್ದಾರೆ.
Vijaya Karnataka Web sharath bache gowda siddaramaiah


ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಹೋಬಳಿಯ ದೊಡ್ಡದೇನಹಳ್ಳಿಯ ಸ್ವಾಭಿಮಾನಿ ಕಾಂಗ್ರೆಸ್‌ ಕಾರ್ಯಕರ್ತರು ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಪಂ ಚುನಾವಣೆಯಲ್ಲಿ ಸ್ವಾಭಿಮಾನಿ ಕಾಂಗ್ರೆಸ್‌ ಹೆಚ್ಚಿನ ಸಂಖ್ಯೆಯಲ್ಲಿ ಜಯ ಗಳಿಸಿದ ಕಾರಣ ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು ಎಂದು ಶರತ್‌ ಬಚ್ಚೇಗೌಡ ಹೇಳಿದರು.
‘ಜೆಡಿಎಸ್ ಬಿಟ್ರೆ ವಿಧಾನಪರಿಷತ್‌ ಸಭಾಪತಿ ಸ್ಥಾನ ಪಡೆಯಲು ಬಿಜೆಪಿಗೆ ಸಾಧ್ಯವಿಲ್ಲ’; ಹೊರಟ್ಟಿ
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ಹೆಜ್ಜೆಗಳ ಕುರಿತು ಚರ್ಚಿಸಲಾಗಿದೆ. ಹೊಸಕೋಟೆ ತಾಲೂಕಿನ 26 ಗ್ರಾಪಂಗಳಿಂದ 496 ಅಭ್ಯರ್ಥಿಗಳು ಸ್ಪರ್ಧಿಸಿ, ಅದರಲ್ಲಿ 352 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಗೆದ್ದವರು-ಸೋತವರು ಎಂಬ ತಾರತಮ್ಯ ಮಾಡದೆ ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನ ನೆರವೇರಿಸಲಾಗುವುದು. ಜನಾ ದೇಶ ಕೊಟ್ಟು ತಾಲೂಕಿನ 26 ಗ್ರಾಪಂಗಳನ್ನು ನಮ್ಮ ತೆಕ್ಕೆಗೆ ಬಂದಿವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ವಿ. ಪ್ರಸಾದ್‌, ಮುಖಂಡರಾದ ಹೆಚ್‌.ಎಂ. ಸುಬ್ಬ ರಾಜು, ಪಿಕೆಎಸ್‌ ಶ್ರೀನಿವಾಸ್‌ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ