ಆ್ಯಪ್ನಗರ

ಕುಂದಾಣ ಸರಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

ಆರೋಗ್ಯ ಸೌಲಭ್ಯಗಳ ಸ್ವಚ್ಛತೆ, ಶುಚಿತ್ವದ ಆಧಾರದ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಿ 2017-18ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ನೀಡಲಾಗಿದೆ.

Vijaya Karnataka 15 Dec 2018, 5:00 am
ಕುಂದಾಣ: ಆರೋಗ್ಯ ಸೌಲಭ್ಯಗಳ ಸ್ವಚ್ಛತೆ, ಶುಚಿತ್ವದ ಆಧಾರದ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಿ 2017-18ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ನೀಡಲಾಗಿದೆ.
Vijaya Karnataka Web kundana government hospital gets kayakalpa award
ಕುಂದಾಣ ಸರಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಆಸ್ಪತ್ರೆ ಜಂಟಿಯಾಗಿ ಈ ಕಾರ್ಯ ಮಾಡಿವೆ.

ಕುಂದಾಣ ಹೋಬಳಿಯ ಕುಂದಾಣ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಮುತಾಹೀರ್‌ ಅಫೀಜ್‌ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲಾಗಿದೆ. ರೋಗಿಗೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸ್ಪಂದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಗ್ಯ ಸೌಲಭ್ಯಗಳನ್ನು ಗ್ರಾಮ ಮಟ್ಟದಲ್ಲಿರುವ ಪ್ರತಿಯೊಬ್ಬರಿಗೂ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಪರಿಗಣಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ ನೀಡಿದೆ. ಇದರಿಂದ ಆಸ್ಪತ್ರೆ ಹಾಗೂ ಗ್ರಾಮಕ್ಕೆ ಹೆಸರು ಬಂದಂತಾಗಿದೆ. ಮುಂದಿನ ದಿನಗಳಲ್ಲೂ ರೋಗಿಗೆ ಚಿಕಿತ್ಸೆ ನೀಡಿದ ನಂತರ ಬರುವ ತ್ಯಾಜ್ಯಗಳನ್ನು ಸಂಗ್ರಹಿಸಿ, ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದು ಎರಡನೇ ಬಾರಿಗೆ ಸಿಕ್ಕಿರುವ ಕಾಯಕಲ್ಪ ಪ್ರಶಸ್ತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ವೇಳೆ ಆಸ್ಪತ್ರೆಯ ಲ್ಯಾಬ್‌ ಟೆಕ್ನಿಷಿಯನ್‌ ಗಂಗಾಧರ್‌, ನೇತ್ರಾಧಿಕಾರಿ ಪಲ್ಲವಿ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ವಸಂತ, ಹಿರಿಯ ಆರೋಗ್ಯ ಸಹಾಯಕ ರಾಮಚಂದ್ರಪ್ಪ, ಕಿರಿಯ ಆರೋಗ್ಯ ಸಹಾಯಕ ನಾರಾಯಣಗೌಡ, ಫಾರ್ಮಸಿಸ್ಟ್‌ ಸೀಮಾ, ಗ್ರೂಪ್‌ ಡಿ ಸಿಬ್ಬಂದಿ ರಾಘವೇಂದ್ರ, ಮಂಜಮ್ಮ, ಶುಶ್ರೂಷಕಿ ಸಾಕಮ್ಮ, ಶ್ವೇತ, ವಿದ್ಯಾವತಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ