ಆ್ಯಪ್ನಗರ

‘ಬಡಜನರ, ಕಾರ್ಮಿಕರ ಹಿತ ಕಾಪಾಡುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ'

ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಸೋಂಕಿನಿಂದ ಮೃತಪಟ್ಟಿದ್ದಾರೆ. ನೇಮಕಾತಿ ನಿಯಮಗಳನ್ನು ಸಡಿಲಿಸಿ ಮೃತರ ಕುಟುಂಬದವರಿಗೆ ಉದ್ಯೋಗ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಖಾಯಂಗೊಳಿಸಿ ಮಾಸಿಕ 10 ಸಾವಿರ ರೂ.ಗಳ ನಿವೃತ್ತ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Vijaya Karnataka Web 27 Nov 2020, 7:22 am
ಹೊಸಕೋಟೆ: ದೇಶದಲ್ಲಿ ಬಡಜನರ, ಕಾರ್ಮಿಕರ ಹಿತ ಕಾಪಾಡುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ತಾಲೂಕು ಸಿಐಟಿಯು ಅಧ್ಯಕ್ಷ ಹರೀಂದ್ರ ಆರೋಪಿಸಿದರು.
Vijaya Karnataka Web protest in bengaluru


ಅವರು ಸಾರ್ವತ್ರಿಕ ಮುಷ್ಕರದ ಪ್ರಯುಕ್ತ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರ ಕೇವಲ ಬಂಡವಾಳಶಾಹಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬಡವರ, ಮಧ್ಯಮ ವರ್ಗದ ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದು ಕಾರ್ಮಿಕ, ರೈತ ವಿರೋಧಿ ನೀತಿಗಳನ್ನೆ ಜಾರಿಗೊಳಿಸುತ್ತಿರುವುದು ಇದಕ್ಕೆ ನಿದರ್ಶನವಾಗಿದೆ. ಸಾರ್ವಜನಿಕ ಸೇವಾ ವಲಯಗಳನ್ನು ಖಾಸಗೀಕರಣಗೊಳಿಸುತ್ತಿದ್ದು ಪ್ರಸ್ತುತ ಪರಿಸ್ಥಿತಿಯಲ್ಲಿ ಬಡಜನರು, ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.

ಕಣ್ವ ಸಹಕಾರಿ ಬ್ಯಾಂಕ್‌ಗೆ ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್‌ ಸಲಹೆ

ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಕಲಾವತಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಸೋಂಕಿನಿಂದ ಮೃತಪಟ್ಟಿದ್ದಾರೆ. ನೇಮಕಾತಿ ನಿಯಮಗಳನ್ನು ಸಡಿಲಿಸಿ ಮೃತರ ಕುಟುಂಬದವರಿಗೆ ಉದ್ಯೋಗ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಖಾಯಂಗೊಳಿಸಿ ಮಾಸಿಕ 10 ಸಾವಿರ ರೂ.ಗಳ ನಿವೃತ್ತ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ವಿರುದ್ಧ ಮಳೆಯಲ್ಲೂ ಪ್ರತಿಭಟಿಸಿದ ಕಾರ್ಮಿಕರು!

ಸಿಐಟಿಯು ತಾಲೂಕು ಕಾರ್ಯದರ್ಶಿ ಮೋಹನ್‌ ಬಾಬು, ಕಾರ್ಯಾಧ್ಯಕ್ಷ ಆನಂದ್‌ಕುಮಾರ್‌, ರೈತ ಸಂಘದ ಅಧ್ಯಕ್ಷ ಅಕ್ಕಲೇಗೌಡ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ