Please enable javascript.ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.3ಕ್ಕೆ - ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.3ಕ್ಕೆ - Vijay Karnataka

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.3ಕ್ಕೆ

ವಿಕ ಸುದ್ದಿಲೋಕ 21 Feb 2014, 12:18 pm
Subscribe

ತಾಲೂಕು ಮಟ್ಟದ 3 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾ.3 ಮತ್ತು 4 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.

 3
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.3ಕ್ಕೆ
ಔರಾದ್: ತಾಲೂಕು ಮಟ್ಟದ 3 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾ.3 ಮತ್ತು 4 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಭಾರಿ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು,ಅಮರೇಶ್ವರ ಕಾಲೇಜಿನ ಆವರಣದಲ್ಲಿ ಸಮ್ಮೇಳನ ನಡೆಯಲಿದೆ ಎಂದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು,ಸಾಹಿತಿಗಳು ಸೇರಿದಂತೆ ತಾಲೂಕಿನ ಕನ್ನಡ ಅಭಿಮಾನಿಗಳು ಪಾಲ್ಗೊಂಡು ಸಮ್ಮೇಳನ ಯಶಸ್ವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದೇವೇಳೆ ಮಾತನಾಡಿದ ತಾಲೂಕು ಕಸಾಪ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ ,ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನಿಜ. ಬಳಿಕ ಜಿಲ್ಲಾಧ್ಯಕ್ಷರ ಮನವರಿಕೆಯಿಂದ ರಾಜೀನಾಮೆಯನ್ನು ವಾಪಾಸ್ ಪಡೆದಿರುವುದಾಗಿ ಹೇಳಿದರು. ಜಿಲ್ಲಾಧ್ಯಕ್ಷರ ಜತೆ ಸಂವಹನ ಕೊರತೆಯಿಂದ ಸಮಸ್ಯೆ ಉಂಟಾಗಿತ್ತು.ಆದರೆ, ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕಾಶಿನಾಥ ಜಾಧವ, ಬಿಜೆಪಿ ಅಧ್ಯಕ್ಷ ಪ್ರಕಾಶ ಅಲ್ಮಾಜೆ, ಸತೀಶ್ ಪಾಟೀಲ್, ಕಿರಣ ಪಾಟೀಲ್ ಸೇರಿದಂತೆ ತಾಲೂಕಿನ ಅನೇಕ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಇದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ