ಆ್ಯಪ್ನಗರ

ಬೀದರ್: 26ರಂದು 100 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜಾರೋಹಣ

ದಕ್ಷಿಣ ಮಧ್ಯ ರೈಲ್ವೆಯಡಿ ಬೀದರ್ ರೈಲ್ವೆ ನಿಲ್ದಾಣ ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ಈ ರೀತಿಯ ಧ್ವಜ ಸ್ಥಂಭಗಳನ್ನು ಅಳವಡಿಸಲು ಸರಕಾರ ನಿರ್ಧರಿಸಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

Vijaya Karnataka Web 24 Jan 2020, 5:20 pm
ಬೀದರ್‌: 26ಕ್ಕೆ ಜನವರಿ 26 ರಂದು ಗಣರಾಜ್ಯೋತ್ಸವದ ದಿನ ಬೆಳಗ್ಗೆ 10 ಗಂಟೆಗೆ ಬೀದರ್ ನಗರದ ರೈಲ್ವೆ ನಿಲ್ದಾಣದಲ್ಲಿ 100 ಅಡಿ ಎತ್ತರದಲ್ಲಿ ಧ್ವಜಾರೋಹಣ ನೆರವೇರಲಿದೆ.
Vijaya Karnataka Web ಭಗವಂತ್‌ ಖೂಬಾ
ಭಗವಂತ್‌ ಖೂಬಾ


ದೇಶದ ಆಯ್ದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಮಾತ್ರ ಈ ಧ್ವಜವನ್ನು ಅಳವಡಿಸಲಾಗುತ್ತಿದ್ದು, ಅದರಲ್ಲಿ ಬೀದರ್ ರೈಲ್ವೆ ನಿಲ್ದಾಣವು ಒಂದಾಗಿದೆ.

ರೈಲ್ವೆ ನಿಲ್ದಾಣಗಳ ಸೌಂದರ್ಯ ಹೆಚ್ಚಿಸುವುದರೊಂದಿಗೆ, ಜನರಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಬೆಳೆಯಲಿ ಎನ್ನುವ ಉದ್ದೇಶದಿಂದ ರೈಲ್ವೆ ಸಚಿವಾಲಯ ಈ ಅಭಿಯಾನ ಆರಂಭಿಸಿದೆ.

ದಕ್ಷಿಣ ಮಧ್ಯ ರೈಲ್ವೆಯಡಿ ಬೀದರ್ ರೈಲ್ವೆ ನಿಲ್ದಾಣ ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ಈ ರೀತಿಯ ಧ್ವಜ ಸ್ಥಂಭಗಳನ್ನು ಅಳವಡಿಸಲು ಸರಕಾರ ನಿರ್ಧರಿಸಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ದಕ್ಷಿಣ ಮಧ್ಯ ರೈಲ್ವೆಯಿಂದ ಈಗಾಗಲೇ ಸಿಕಂದರಾಬಾದ್ ಮತ್ತು ಹೈದರಾಬಾದ್‌ಗಳಲ್ಲಿ ಧ್ವಜ ಅಳವಡಿಸಲಾಗಿದೆ.

ಇದೀಗ ಮೂರನೇಯದಾಗಿ ಬೀದರ್ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗುತ್ತಿದೆ. ಇದು ನಮ್ಮ ಜಿಲ್ಲೆಗೆ ಹೆಮ್ಮೆಯ ಮತ್ತು ಗೌರವ ಪಡುವಂತಹ ವಿಷಯವಾಗಿದೆ ಎಂದೂ ಖೂಬಾ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ