ಆ್ಯಪ್ನಗರ

ಬಸವಕಲ್ಯಾಣದಲ್ಲಿ 'ಶರಣು ಸಲಗರ'ಗೆ 25 ಸಾವಿರ ಮತಗಳ ಗೆಲುವು: ಬಿ.ಎಸ್. ಯಡಿಯೂರಪ್ಪ

ಬಸವಕಲ್ಯಾಣ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಸುಮಾರು 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್ ಮೂರೂ ಕಡೆಗಳಲ್ಲಿ ಧೂಳೀಪಟವಾಗಲಿದೆ ಎಂದರು.

Vijaya Karnataka Web 12 Apr 2021, 5:29 pm
ಬೀದರ್: ಬಸವಕಲ್ಯಾಣ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಸುಮಾರು 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Vijaya Karnataka Web BS Yediyurappa 4
Karnataka CM B S Yediyurappa


ಬಿಜೆಪಿ ಅಭ್ಯರ್ಥಿ ಬಸವಕಲ್ಯಾಣದಲ್ಲಿ ಗೆಲ್ಲುವ ಬಗ್ಗೆ ಯಾರಿಗೂ ಅನುಮಾನ ಬೇಡ. ಹಾಗೆಯೇ, ಮಸ್ಕಿ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ಮೂರೂ ಕಡೆಗಳಲ್ಲಿ ಧೂಳೀಪಟವಾಗಲಿದೆ ಎಂದರು.

ಈ ಹಿಂದೆ ನಡೆದ 15 ವಿಧಾನ ಸಭೆ ಉಪಚುನಾವಣೆಗಳ ಪೈಕಿ ಬಿಜೆಪಿ ಅಭ್ಯರ್ಥಿಗಳು 13 ಕಡೆಗಳಲ್ಲಿ ಗೆದ್ದಿದ್ದರು. ಇಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕಾಂಗ್ರೆಸ್ ನಾಯಕರು ತಿರುಕನ ಕನಸು ಕಾಣುತ್ತಾರೆ ಎಂದು ವ್ಯಂಗ್ಯವಾಡಿದರು.

ಬಸವಕಲ್ಯಾಣದಲ್ಲಿ ಬಿಜೆಪಿಗೆ ದಾಖಲೆಯ ವಿಜಯ - ಬಸವರಾಜ ಬೊಮ್ಮಾಯಿ ವಿಶ್ವಾಸ

ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ, ಮಲ್ಲಿಕಾರ್ಜುನ ಖರ್ಗೆ ಆರೋಪಗಳನ್ನು ನಾನು ಟೀಕಿಸುವುದಕ್ಕೆ ಹೋಗುವುದಿಲ್ಲ. ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿಗಳೇ ಉಪಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ಭರವಸೆ ನೀಡಿದರು.

ಬಸವಕಲ್ಯಾಣ ಮತದಾರರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸುದೀರ್ಘ ಪತ್ರ!

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ವಿ. ಸೋಮಣ್ಣ, ಸಚಿವ ಪ್ರಭು ಚವ್ಹಾಣ್, ಸಂಸದ ಭಗವಂತ ಖೂಬಾ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ