ಆ್ಯಪ್ನಗರ

ಕಳಪೆ ಕಾಮಗಾರಿ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ

ಇಲ್ಲಿನ ನೂತನ ಬ್ರಿಮ್ಸ್‌ ಆಸ್ಪತ್ರೆಯ ಕಟ್ಟಡ ನಿರ್ಮಾಣದ ಕಳಪೆ ಕಾಮಗಾರಿಯ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕ್ಕದ್ದಮೆ ಹಾಕಿ ಕಠಿಣ ಕ್ರಮ ಜರುಗಿಸಬೇಕು ಎಂದು ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಈ ತುಕಾರಾಮ್‌ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.

Vijaya Karnataka 21 Jun 2019, 5:21 pm
ಬೀದರ್‌ :ಇಲ್ಲಿನ ನೂತನ ಬ್ರಿಮ್ಸ್‌ ಆಸ್ಪತ್ರೆಯ ಕಟ್ಟಡ ನಿರ್ಮಾಣದ ಕಳಪೆ ಕಾಮಗಾರಿಯ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕ್ಕದ್ದಮೆ ಹಾಕಿ ಕಠಿಣ ಕ್ರಮ ಜರುಗಿಸಬೇಕು ಎಂದು ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಈ ತುಕಾರಾಮ್‌ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.
Vijaya Karnataka Web bjp insists on filing a poor case
ಕಳಪೆ ಕಾಮಗಾರಿ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ


ಕಳೆದ ವರ್ಷ 150ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರಿಮ್ಸ್‌ ಆಸ್ಪತ್ರೆ ಕಾಮಗಾರಿ ಕಳಪೆಯಾಗಿದ್ದಂತೆ ಕಂಡುಬರುತ್ತಿದೆ. ಇಡೀ ಆಸ್ಪತ್ರೆ ಕಟ್ಟಡದಲ್ಲಿ ಬಿರುಕು ಬಿಟ್ಟು ನೆಲ ಕುಸಿತವಾಗುವ ಸ್ಥಿತಿಯಲ್ಲಿದೆ. ಈಗಾಗಲೇ ಆಸ್ಪತ್ರೆಯ ಮುಂಭಾಗದ ಬೃಹತ್‌ ಚಾವಣಿ ಕುಸಿದು ಬಿದ್ದಿದೆ. ಕಟ್ಟಡದ ಉದ್ಘಾಟನೆಯನ್ನು ಕಳೆದ ವರ್ಷ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಾತುರಿಯಲ್ಲಿ ನೆರವೇರಿಸಿದ್ದಾರೆ ಎಂದು ತಿಳಿಸಲಾಗಿದೆ.

ಆಸ್ಪತ್ರೆಯ ಉದ್ಘಾಟನೆಯಾದ ಒಂದೇ ವರ್ಷದಲ್ಲಿ ಕಟ್ಟಡ ಕುಸಿದು ಬಿದ್ದು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿಯಲ್ಲಿ ಹೈದರಾಬಾದ್‌ ಮೂಲದ ಗುತ್ತಿಗೆದಾರರು ಮತ್ತು ಮೇಲುಸ್ತುವಾರಿ ವಹಿಸಿದ ಪಿಡಬ್ಲ್ಯೂಡಿ ಅಭಿಯಂತರರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಶಾಮಿಲಾಗಿರುವುದು ಕಂಡುಬರುತ್ತಿದೆ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ವಿರುದ್ಧ ಕೂಡಲೆ ಕ್ರಿಮಿನಲ್‌ ಮೊಕ್ಕದ್ದಮೆ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿದರು.

ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಔಷಧ ಕೊರತೆಯಿದೆ. ಲಿಫ್ಟ್‌ ಕೆಲಸ ಮಾಡುತ್ತಿಲ್ಲ. ಪೀಠೋಪಕರಣಗಳಿಲ್ಲ. ವಿದ್ಯುತ್‌ ಇರುತ್ತಿಲ್ಲ ಹೀಗೆ ಹತ್ತು ಹಲವು ಸಮಸ್ಯೆಗಳಿವೆ. ಕೂಡಲೇ ಬಗೆಹರಿಸಿ ಜನರಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಭಗವಂತ ಖೂಬಾ, ಎಂಎಲ್ಸಿ ರಘುನಾಥ ಮಲ್ಕಾಪುರೆ, ಪಕ್ಷದ ಪ್ರಧಾನ ಕಾರ‍್ಯದರ್ಶಿಗಳಾದ ಈಶ್ವರಸಿಂಗ್‌ ಠಾಕೂರ್‌, ಜಯಕುಮಾರ ಕಾಂಗೆ, ಸೋಮನಾಥ ಪಾಟೀಲ್‌, ಬಾಬುರಾವ್‌ ಕಾರಬಾರಿ, ಪಕ್ಷದ ರಾಜ್ಯ ಕಾರ‍್ಯಕಾರಿಣಿ ಸದಸ್ಯ ಬಾಬು ವಾಲಿ, ನಗರಾಧ್ಯಕ್ಷ ರಾಜಕುಮಾರ ಚಿದ್ರಿ, ಅಶೋಕ ಹೊಕ್ರಾಣೆ ಮತ್ತಿತರರು ಕೋರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ