ಆ್ಯಪ್ನಗರ

ಬೀದರ್: ಸಾರಿಗೆ ಸಿಬ್ಬಂದಿ, ಸೇವೆಗೆ ಬಂದರಷ್ಟೇ ಸಂಬಳ

ಯಾವನದೋ ಮಾತು ಕೇಳಿ ಮುಷ್ಕರ ನಡೆಸಿದರೆ ಹೇಗೆ? ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಹಬ್ಬದ ಸಂದರ್ಭಗಳಲ್ಲಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿದೆ. ಕೊರೊನಾ ಸಂಕಷ್ಟದಲ್ಲಿ ಸಾರಿಗೆ ನೌಕರರು ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು

Vijaya Karnataka Web 12 Apr 2021, 9:30 pm
ಬೀದರ್‌: ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈಗ ಸರಕಾರ ಕೂಡ ಖಡಕ್‌ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಿದೆ.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ


ಸಾರಿಗೆ ನೌಕರರು ಸೇವೆಗೆ ಬಂದರಷ್ಟೇ ಸಂಬಳ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಆಗಿ ನುಡಿದರು.

ಸಾರಿಗೆ ಸಿಬ್ಬಂದಿಯ ಮುಷ್ಕರ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವಯುತವಾಗಿ ಸಾರಿಗೆ ನೌಕರರು ಸೇವೆಗೆ ಹಾಜರಾಗಬೇಕು. ಆ ಬಳಿಕವೇ ಸಂಬಳ ನೀಡಲಾಗುವುದು ಎಂದರು.

ಯಾವನದೋ ಮಾತು ಕೇಳಿ ಮುಷ್ಕರ ನಡೆಸಿದರೆ ಹೇಗೆ? ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಹಬ್ಬದ ಸಂದರ್ಭಗಳಲ್ಲಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿದೆ. ಕೊರೊನಾ ಸಂಕಷ್ಟದಲ್ಲಿ ಸಾರಿಗೆ ನೌಕರರು ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು.

ರಾಜ್ಯ ಸರಕಾರ ಸಂಕಷ್ಟದಲ್ಲಿದ್ದರೂ ಸಾರಿಗೆ ಸಿಬ್ಬಂದಿಗಳ ಸಂಬಳಕ್ಕಾಗಿ ನಿಗಮಕ್ಕೆ 2500 ಕೋಟಿ ರೂ. ನೀಡಲಾಗಿತ್ತು. ಸರಕಾರದ ನಿಷೇದಾಜ್ಞೆಯ ನಡುವೆಯೂ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಕ್ರಮ ಕೈಗೊಳ್ಳಲಾಗುವುದು ಎಂದಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ