ಆ್ಯಪ್ನಗರ

ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಅನ್ಯಾಯ: ಸಿಎಂಗೆ ದೂರು

ಜಿಲ್ಲೆಯಲ್ಲಿ ಸರಕಾರದ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕ ಆರೋಪಿಸಿದೆ.

Vijaya Karnataka 30 Jun 2019, 5:00 am
ಬೀದರ್‌:ಜಿಲ್ಲೆಯಲ್ಲಿ ಸರಕಾರದ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕ ಆರೋಪಿಸಿದೆ.
Vijaya Karnataka Web injustice to sc and st contractors complaint to cm
ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಅನ್ಯಾಯ: ಸಿಎಂಗೆ ದೂರು


ಸಂಘದ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ ಹಾಸನಕರ್‌ ಅವರ ನೇತೃತ್ವದಲ್ಲಿ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ನಡೆದ ಜನತಾ ದರ್ಶನದಲ್ಲಿ ನಿಯೋಗದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈ ಕುರಿತು ದೂರು ಸಲ್ಲಿಸಿದ್ದಾರೆ.

ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ವಸತಿ ಶಾಲೆಗಳು, ಸಣ್ಣ ನೀರಾವರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಾಮಗಾರಿಗಳ ಗುತ್ತಿಗೆಯಿಂದ ಎಸ್‌ಸಿ,ಎಸ್‌ಟಿ ಗುತ್ತಿಗೆದಾರರನ್ನು ವ್ಯವಸ್ಥಿತವಾಗಿ ವಂಚಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ರೂ. 50 ಲಕ್ಷ ಕ್ಕಿಂತ ಕಡಿಮೆ ಮೊತ್ತದ ಕಾಮಗಾರಿ ಇದ್ದರೂ, ಎರಡು ಮೂರು ಕಾಮಗಾರಿಗಳನ್ನು ಸೇರಿಸಿ, ರೂ. 1 ಕೋಟಿಯಿಂದ ರೂ. 2 ಕೋಟಿಯ ಪ್ಯಾಕೇಜ್‌ ಮಾಡಿ ಗುತ್ತಿಗೆ ಸಿಗದಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಶೇ 24.5 ರಷ್ಟು ಕಾಮಗಾರಿಗಳನ್ನು ಮೀಸಲು ಇಡಲು ಇಲಾಖಾ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಬೇಕು. ಈ ಮೂಲಕ ಎಸ್‌ಸಿ,ಎಸ್‌ಟಿ ಗುತ್ತಿಗೆದಾರರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಿದ್ದಾರೆ.

ಸಂಘದ ರಾಜ್ಯ ಪರಿಷತ್‌ ಸದಸ್ಯ ಪ್ರಶಾಂತ ಸಾಗರ, ಜಿಲ್ಲಾ ಉಪಾಧ್ಯಕ್ಷ ವಿಠ್ಠಲ ಪಾಂಡೆ, ಶಿವಾಜಿ ಚವಾಣ್‌, ಪ್ರಧಾನ ಕಾರ್ಯದರ್ಶಿ ಪ್ರಕಾಶ ಭಾವಿಕಟ್ಟಿ, ಸಂಘಟನಾ ಕಾರ್ಯದರ್ಶಿ ಪಂಕಜ ಸೂರ್ಯವಂಶಿ, ಬೀದರ್‌ ತಾಲೂಕು ಘಟಕದ ಅಧ್ಯಕ್ಷ ವಿನೋದ ಅಪ್ಪೆ, ಪಂಢರಿನಾಥ ಮಲ್ಕಾಪೂರ, ಶರಣಪ್ಪ ವಾಡೇಕರ, ಪೃಥ್ವಿರಾಜ ನಿಟ್ಟೂರ, ಕಿರಣಕುಮಾರ ಕನೇರಿ, ಅಂಬಾದಾಸ ಟಿಳ್ಳೆ, ಸೋಮಶೇಖರ ಬುಳ್ಳಾ, ರಾಜಕುಮಾರ ವಾಘಮಾರೆ, ಸಂಜುಕುಮಾರ ದೊಡ್ಡಮನಿ ನಿಯೋಗದಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ