ಆ್ಯಪ್ನಗರ

ಲೋಕ ಚುನಾವಣೆ; ಚ್ಯುತಿ ಬಾರದಂತೆ ಕೆಲಸ ಮಾಡಿ

ಲೋಕಸಭಾ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್‌ ಅಧಿಕಾರಿಗಳು ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಿಐಡಿ ಕಾನೂನು ಸಲಹೆಗಾರ ಮಹೇಶ್‌.ವಿ.ವೈದ್ಯ ತಿಳಿಸಿದರು.

Vijaya Karnataka 14 Mar 2019, 5:37 pm
ಬೀದರ್‌ :ಲೋಕಸಭಾ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್‌ ಅಧಿಕಾರಿಗಳು ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಿಐಡಿ ಕಾನೂನು ಸಲಹೆಗಾರ ಮಹೇಶ್‌.ವಿ.ವೈದ್ಯ ತಿಳಿಸಿದರು.
Vijaya Karnataka Web lok sabha elections do not work well
ಲೋಕ ಚುನಾವಣೆ; ಚ್ಯುತಿ ಬಾರದಂತೆ ಕೆಲಸ ಮಾಡಿ


ನಗರದ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಎಂಸಿಸಿ ತಂಡದ ಅಧಿಕಾರಿಗಳು ಮತ್ತು ಪೊಲೀಸ್‌ ಸಿಬ್ಬಂದಿಗೆ ನಡೆದ ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿ ಚುನಾವಣೆ ಕೆಲಸವನ್ನು ಮಾತ್ರ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಅನ್ಯ ಕೆಲಸದಲ್ಲಿ ತೊಡಗಿಸಿಕೊಳ್ಳುವಂತಿಲ್ಲ ಎಂದು ಹೇಳಿದರು.

ಚುನಾವಣೆ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದು, ಇಂಥ ವ್ಯಕ್ತಿಗೆ ಮತ ಹಾಕಬೇಕು ಎಂದು ಹೇಳುವುದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಇದಕ್ಕೆ ಅವಕಾಶ ಮಾಡಬಾರದು. ಯಾವುದೇ ವ್ಯಕ್ತಿ ಅಥವಾ ಗುಂಪಿನಿಂದ ಮತದಾನಕ್ಕೆ ಅಡ್ಡಿಪಡಿಸುವುದು, ಗಲಾಟೆ ಮಾಡಿಸಿದಲ್ಲಿ ಅಂಥವರ ವಿರುದ್ಧ ಮುಲಾಜಿಲ್ಲದೆ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಮತದಾನದ ರಹಸ್ಯ ಕಾಪಾಡುವುದು ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿಯಾಗಿದೆ. ಈ ವಿಷಯದಲ್ಲಿ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಮತದಾನದ ದಿನದಂದು ಮತದಾರರಿಗೆ ಸಾರಿಗೆ ಸೌಲಭ್ಯ ಕಲ್ಪಿಸುವುದು ಅಪರಾಧವಾಗುತ್ತದೆ. ಈ ವಿಷಯದಲ್ಲಿ ಪೊಲೀಸ್‌ ಅಧಿಕಾರಿಗಳು ಗಮನ ಹರಿಸಬೇಕು ಎಂದರು. ಸಂದಿಗ್ಧ ಪರಿಸ್ಥಿತಿಯಲ್ಲಿ ಪೊಲೀಸ್‌ ಅಧಿಕಾರಿಗಳು ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿ ಡಾ.ಎಚ್‌.ಆರ್‌.ಮಹಾದೇವ್‌, ಸಿಇಒ ಮಹಾಂತೇಶ ಬೀಳಗಿ, ಎಸ್ಪಿ ಟಿ.ಶ್ರೀಧರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ್‌ ಗಾಳಿ, ಸಹಾಯಕ ಆಯುಕ್ತರಾದ ಗ್ಯಾನೇಂದ್ರಕುಮಾರ ಗಂಗವಾರ, ಚುನಾವಣಾ ಮಾಸ್ಟರ್‌ ಟ್ರೇನರ್‌ ಡಾ.ಗೌತಮ ಅರಳಿ, ಚುನಾವಣಾ ತಹಸೀಲ್ದಾರ್‌ ಅಂಜುಮ್‌ ತಬಫಮ್‌, ಚುನಾವಣಾ ಅಧಿಕಾರಿ, ಪೊಲೀಸ್‌ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ