ಆ್ಯಪ್ನಗರ

ಅಲೆಮಾರಿ, ಅರೆ ಅಲೆಮಾರಿ ಜನರ ಸಮೀಕ್ಷೆಗೆ ಸೂಚನೆ

ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಸರ್ವೇ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ನಿರ್ದೇಶನ ನೀಡಿದರು.

Vijaya Karnataka 28 Sep 2019, 10:38 pm
ಬೀದರ್‌:ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಸರ್ವೇ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ನಿರ್ದೇಶನ ನೀಡಿದರು.
Vijaya Karnataka Web notice to survey of nomadic people
ಅಲೆಮಾರಿ, ಅರೆ ಅಲೆಮಾರಿ ಜನರ ಸಮೀಕ್ಷೆಗೆ ಸೂಚನೆ


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸೋಮವಾರ ನಡೆದ ಜಿಲ್ಲಾಮಟ್ಟದ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಸೌಲಭ್ಯ, ಪ್ರಗತಿ ಪರಿಶೀಲನಾ, ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ ದೇವಮಾನೆ ಮಾತನಾಡಿ, ಇಲಾಖೆಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ನೀಡಬೇಕಾದ ಸೌಕರ್ಯಗಳು ಮತ್ತು ಪ್ರಗತಿಯ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನೆಲೆಸಿದ್ದಾರೆ. ಇವರಲ್ಲಿವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕಿದೆ. ಪ್ರತಿ ತಾಲೂಕಿಗೆ ಐದು ಎಕರೆಯಷ್ಟು ನಿವೇಶನದ ಅಗತ್ಯವಿದೆ ಎಂದು ಸಭೆಗೆ ತಿಳಿಸಿದರು.

ಬೀದರ್‌ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ ಮಾತನಾಡಿ, ನಗರದಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗಾಗಿ ನಗರಸಭೆಯಿಂದ ಎರಡು ಎಕರೆ ಹಾಗೂ ಕೆಲವು ತಾಲೂಕುಗಳಲ್ಲಿನಿವೇಶನ ಕೊಡಲಾಗಿದೆ ಎಂದು ತಿಳಿಸಿದರು.

ನೌಬಾದ್‌ನಲ್ಲಿರುವ ಕೆಲವು ಅಲೆಮಾರಿ ಸಮುದಾಯವರು ತಮ್ಮ ಮಕ್ಕಳಿಗೆ ಸಮೀಪದ ಶಾಲೆಯಲ್ಲಿದಾಖಲಾತಿ ಮಾಡಿಸಿದ್ದಾರೆ. ಆ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ವಾಹನ ವ್ಯವಸ್ಥೆ ಮಾಡಬೇಕೆಂಬ ಬೇಡಿಕೆಯಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಮಾತನಾಡಿ, ಇಲಾಖೆಯಿಂದ ವಾಹನ ವ್ಯವಸ್ಥೆ ಕಲ್ಪಿಸಲು ಅವಕಾಶ ಇದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಕಾಲೊನಿಗಳಲ್ಲಿಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿಶೇ.70ರಷ್ಟು ಮಾತ್ರ ಪೂರ್ಣಗೊಂಡಿವೆ. ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಅಲೆಮಾರಿ ಸಮಾಜದ ಮುಖಂಡರಾದ ಸಿದ್ರಾಮ ವಾಘಮಾರೆ ಕೋರಿದರು.

ಇದಕ್ಕೆ ಅಪರ ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿ, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗಮಣಿ, ತಾಲೂಕು ಅಧಿಕಾರಿಗಳಾದ ಅಶೋಕ ಶೇರಿಕಾರ, ಗದಗೆಪ್ಪಾ, ವಿಜಯಮಾಲಾ, ವಿಠಲ, ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ