ಆ್ಯಪ್ನಗರ

ಚುನಾವಣಾ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ

ಏ.23 ರಂದು ನಡೆಯಲಿರುವ ಲೋಕಸಭಾ ಚುನಾವಣೆ-2019ರ ಮತದಾನದ ಹಿನ್ನೆಲೆಯಲ್ಲಿ ಏ.22 ಮತ್ತು 23 ರಂದು ಅಭ್ಯರ್ಥಿಗಳು, ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಎಂ.ಸಿ.ಎಂ.ಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

Vijaya Karnataka 21 Apr 2019, 5:00 am
ಬೀದರ್‌:ಏ.23 ರಂದು ನಡೆಯಲಿರುವ ಲೋಕಸಭಾ ಚುನಾವಣೆ-2019ರ ಮತದಾನದ ಹಿನ್ನೆಲೆಯಲ್ಲಿ ಏ.22 ಮತ್ತು 23 ರಂದು ಅಭ್ಯರ್ಥಿಗಳು, ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಎಂ.ಸಿ.ಎಂ.ಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
Vijaya Karnataka Web pre order mandate for electoral advertising
ಚುನಾವಣಾ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ


ಅಭ್ಯರ್ಥಿಗಳು ಏ.22 ಮತ್ತು 23 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಈ ಜಾಹೀರಾತಿನ ಎರಡು ಸ್ವಯಂ ದೃಢೀಕರಣ ಪ್ರತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಿಗದಿತ ಅವಧಿಯೊಳಗೆ ಎಂ.ಸಿ.ಎಂ.ಸಿ ಸಮಿತಿಗೆ ಅರ್ಜಿ ಸಲ್ಲಿಸಿರಬೇಕು. ಜಿಲ್ಲಾ ಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು. ಈ ಕಾಯ್ದೆಯನ್ನು ಉಲ್ಲಂಘಿಸಿದರೆ 2 ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನು ವಿಧಿಸಬಹುದಾಗಿದೆ. ಟಿವಿ, ರೇಡಿಯೋ, ಕೇಬಲ್‌ ನೆಟವರ್ಕ್‌ ಹಾಗೂ ಎಲ್ಲ ಡಿಜಿಟಲ್‌ ಮಾಧ್ಯಮಗಳು ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿಸಿದ ವಿಷಯಗಳ ಪ್ರಸಾರ ಮಾಡದಂತೆ ಕ್ರಮವಹಿಸಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವವರು ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು, ಮನವಿಗಳು, ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು. ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್‌ ಪೋಲ್‌ ಫಲಿತಾಂಶ ಪ್ರಕಟಿಸುವುದು, ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು, ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆಯಡಿ ಬರುತ್ತದೆ.

ಏ.23 ರಂದು ಮತದಾನ ನಡೆಯಲಿದ್ದು, ಎಲ್ಲ ಎಲೆಕ್ಟ್ರಾನಿಕ್‌, ಡಿಜಿಟಲ್‌ ಮಾಧ್ಯಮಗಳು ದಿ.21ರ ಸಂಜೆ 6 ಗಂಟೆಯಿಂದ ದಿ.23ರ ಸಂಜೆ 6.30 ಗಂಟೆಯವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಅವರು ತಿಳಿಸಿದ್ದಾರೆ.

ಚುನಾವಣೆ: ಮದ್ಯ ಮಾರಾಟ ನಿಷೇಧ

ಬೀದರ್‌: ಬೀದರ್‌ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ವ್ಯಾಪ್ತಿಗೆ ಬರಲಿರುವ 06 ವಿಧಾನಸಭಾ ಕ್ಷೇತ್ರಗಳಾದ ಬೀದರ್‌ ಉತ್ತರ, ಬೀದರ್‌ ದಕ್ಷಿಣ, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌ ಮತ್ತು ಔರಾದ್‌ ಕ್ಷೇತ್ರಗಳಲ್ಲಿ ಏ.23ರಂದು ಮತದಾನ ನಡೆಯಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಏ.21ರ ಸಂಜೆ 6 ಗಂಟೆಯಿಂದ ಏ.24ರ ಬೆಳಗ್ಗೆ 7 ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನವಾದ ಮೇ 23ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಬೀದರ್‌ ಜಿಲ್ಲೆಯಲ್ಲಿರುವ ಎಲ್ಲ ರೀತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು/ಸಾಗಾಣಿಕೆ/ಸಂಗ್ರಹಣೆ/ಮಾರಾಟ ಮಳಿಗೆಗಳನ್ನು ಮುಚ್ಚಿ ಒಣ ದಿನಗಳೆಂದು ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿನ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂಥವರು ಪ್ರಜಾ ಪ್ರತಿನಿಧಿ ಕಾಯ್ದೆ, 1951 ರ ಕಲಂ 135 ಅ(2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ