ಆ್ಯಪ್ನಗರ

ಕಾರಂಜಾ ಜಲಾಶಯಕ್ಕೆ ಎಸ್ಪಿ ಭೇಟಿ, ಭದ್ರತಾ ಪರಿಶೀಲನೆ

ಉಗ್ರರು ವಿಧ್ವಂಸಕ ಕೃತ್ಯ ನಡೆಸಬಹುದು ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲೆಯಲ್ಲೂ ಪೊಲೀಸ್‌ ಸಿಬ್ಬಂದಿ ಅಲರ್ಟ್‌ ಆಗಿದೆ.

Vijaya Karnataka 27 Aug 2019, 2:20 pm
ಬೀದರ್‌ :ಉಗ್ರರು ವಿಧ್ವಂಸಕ ಕೃತ್ಯ ನಡೆಸಬಹುದು ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲೆಯಲ್ಲೂ ಪೊಲೀಸ್‌ ಸಿಬ್ಬಂದಿ ಅಲರ್ಟ್‌ ಆಗಿದೆ.ಭಾನುವಾರ ಜಿಲ್ಲೆಯ ಏಕೈಕ ನೀರಿನ ಮೂಲ ಕಾರಂಜಾ ಜಲಾಶಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ್‌ ಅವರು ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web sp visit to karanja reservoir security check
ಕಾರಂಜಾ ಜಲಾಶಯಕ್ಕೆ ಎಸ್ಪಿ ಭೇಟಿ, ಭದ್ರತಾ ಪರಿಶೀಲನೆ

ಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳು ಶ್ವಾನ ದಳದೊಂದಿಗೆ ಇಡೀ ಜಲಾಶಯವನ್ನು ಪರಿಶೀಲನೆ ನಡೆಸಿದರು. ಎಲ್ಲ ಗೇಟ್‌ಗಳು, ಯಂತ್ರಗಳು ಹಾಗೂ ಕಟ್ಟಡಗಳನ್ನು ವೀಕ್ಷಿಸಿ, ಭದ್ರತಾ ತಪಾಸಣೆ ನಡೆಸಿದರು. ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಜನರಿಗೆ ನೀರುಣಿಸುವ ಕಾರಂಜಾ ಜಲಾಶಯಕ್ಕೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.

ಅಲ್ಲದೆ, ಜಿಲ್ಲೆಯ ಪ್ರಮುಖ ಹೆದ್ದಾರಿಗಳಲ್ಲಿನ ಚೆಕ್‌ ಪೋಸ್ಟ್‌ಗಳಲ್ಲೂ ಪೊಲೀಸರು ನಿಗಾ ಇಟ್ಟಿದ್ದಾರೆ. ನೆರೆ ರಾಜ್ಯಗಳಿಂದ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಹೊರ ಹೋಗುವ ಎಲ್ಲ ರೀತಿಯ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಜತೆಗೆ, ಬೀದರ್‌ ನಗರದ ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ, ಮಾಲ್‌, ಕೋಟೆ, ವಾಯು ನೆಲೆ ಸೇರಿದಂತೆ ನಗರದ ಪ್ರಮುಖ ಜನ ನಿಬಿಡ ಪ್ರದೇಶಗಳಲ್ಲಿ ಪೊಲೀಸರ ಗಸ್ತು ಹೆಚ್ಚಿಸಲಾಗಿದ್ದು, ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ.

ನಗರದಲ್ಲಿ ನಿತ್ಯವೂ ಪೊಲೀಸರು ಪುಮುಖ ಪ್ರದೇಶಗಳಲ್ಲಿ ಕಡ್ಡಾಯವಾಗಿ ಗಸ್ತು ತಿರುಗುತ್ತಿದ್ದು, ಇದೀಗ ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ ಗಸ್ತು ಹೆಚ್ಚಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ. ಮೇಲಧಿಕಾರಿಗಳು ಸಭೆ ನಡೆಸಿ ಎಲ್ಲೆಡೆ ಅಲರ್ಟ್‌ ಆಗಿರುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ.

ಎಸ್ಪಿ ಟಿ. ಶ್ರೀಧರ್‌, ಭಾಲ್ಕಿ ಡಿವೈಎಸ್ಪಿ ವೆಂಕನಗೌಡ ಪಾಟೀಲ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ವಿಜಯಕುಮಾರ ಬಿರಾದಾರ್‌, ಧನ್ನೂರ ಪೊಲೀಸ್‌ ಠಾಣೆಯ ಪಿಎಸ್‌ಐ ರಘುವೀರಸಿಂಗ್‌ ಠಾಕೂರ್‌ ಹಾಗೂ ಪೊಲೀಸ್‌ ಸಿಬ್ಬಂದಿ ಕಾರಂಜಾ ಜಲಾಶಯದ ಬಳಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ