ಆ್ಯಪ್ನಗರ

ಮೂವರು ಸಚಿವರಿದ್ದರೂ ರೈತರ ಸಮಸ್ಯೆಗಳಿಗೆ ಸ್ಪಂದನೆ ಇಲ್ಲ

ಜಿಲ್ಲೆಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ರೈತರು ಬರದ ದವಡೆಗೆ ಸಿಲುಕಿದ್ದಾರೆ. ಇದುವರೆಗೂ ಬರ ಪರಿಹಾರ ದೊರಕಿಲ್ಲ.

Vijaya Karnataka 9 Jun 2019, 9:14 pm
ಭಾಲ್ಕಿ:ಜಿಲ್ಲೆಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ರೈತರು ಬರದ ದವಡೆಗೆ ಸಿಲುಕಿದ್ದಾರೆ. ಇದುವರೆಗೂ ಬರ ಪರಿಹಾರ ದೊರಕಿಲ್ಲ. ಜಿಲ್ಲೆಯಲ್ಲಿರುವ ಸಕ್ಕರೆ ಕಾರಖಾನೆಗಳು ರೈತರಿಗೆ ಕೊಡಬೇಕಾದ ಕಬ್ಬಿನ ಬಾಕಿ ಹಣ ನೀಡುತ್ತಿಲ್ಲ. ಬೆಳೆ ವಿಮೆ ಹಣ ಇಲ್ಲಿಯ ವರೆಗೆ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚಿಲ್ಲ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಆರೋಪಿಸಿದ್ದಾರೆ.
Vijaya Karnataka Web though the three ministers farmers problems are not respected
ಮೂವರು ಸಚಿವರಿದ್ದರೂ ರೈತರ ಸಮಸ್ಯೆಗಳಿಗೆ ಸ್ಪಂದನೆ ಇಲ್ಲ


ರಾಜ್ಯದಲ್ಲಿ ರೈತಪರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಕುಮಾರ ಸ್ವಾಮಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದಾಗ ಹರ್ಷಗೊಂಡಿದ್ದ ರೈತರು, ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆ ಇಲ್ಲಿಯೆ ವರೆಗೆ ಅನೇಕ ರೈತರಿಗೆ ತಲುಪದೇ ಇರುವುದು ಭ್ರಮ ನಿರಸನಗೊಳಿಸಿದರೆ, ಮೈತ್ರಿ ಸರಕಾರದಲ್ಲಿ ಸ್ವಾತಂತ್ರ್ಯದ ನಂತರ ಜಿಲ್ಲೆಗೆ ಮೊದಲ ಬಾರಿಗೆ ಏಕಕಾಲಕ್ಕೆ ಮೂವರು ಸಚಿವರನ್ನು ನೇಮಕ ಮಾಡಿದಾಗ ರೈತರ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಗಲಿವೆ ಎಂದು ಭಾವಿಸಲಾಗಿತ್ತು. ಆದರೆ, ರೈತರ ಯಾವುದೇ ಸಮಸ್ಯೆಗಳು ಬಗೆ ಹರಿಯದೇ ಗಾಯದ ಮೇಲೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಜಿಲ್ಲೆಗೆ ಮೂವರು ಸಚಿವರುಗಳು ಎಂಬ ಹೆಮ್ಮೆ ಬಿಟ್ಟರೆ, ರೈತರ ಸಮಸ್ಯೆಗಳಿಗೆ ಸಚಿವರು ಸ್ಪಂದಿಸಲು ಮನಸ್ಸು ಮಾಡುತ್ತಿಲ್ಲ ಎಂದು ಪ್ರಕಟಣೆಯಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ