ಆ್ಯಪ್ನಗರ

ಚುನಾವಣಾ ಆಯೋಗದ ಅಪೇಕ್ಷೆಯಂತೆ ಕೆಲಸ ಮಾಡಿ

Vijaya Karnataka 1 Apr 2018, 5:34 pm
ಬೀದರ್‌ : ಚುನಾವಣೆ ಆಯೋಗವು ಅಪೇಕ್ಷಿಸುವ ರೀತಿಯಲ್ಲಿ ಎಲ್ಲ ಚಟುವಟಿಕೆಗಳು ತೀವ್ರಗೊಳ್ಳುವುದಕ್ಕೆ ತಾವು ಸಿದ್ಧರಾಗಿರಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಚ್‌.ಆರ್‌. ಮಹದೇವ್‌ ಕಟ್ಟುನಿಟ್ಟಿನ ಸೂಚನೆ ನೀಡಿದರು.
Vijaya Karnataka Web work as the election commission desires
ಚುನಾವಣಾ ಆಯೋಗದ ಅಪೇಕ್ಷೆಯಂತೆ ಕೆಲಸ ಮಾಡಿ


ವಿಡಿಯೋ ವೀಕ್ಷಕರ ತಂಡ (ವಿವಿಟಿ), ವಿಡಿಯೋ ಚಿತ್ರೀಕರಣ ತಂಡ (ವಿಎಸ್‌ಟಿ) ಹಾಗೂ ಚುನಾವಣೆ ವೀಕ್ಷಕರ ತಂಡ ಮತ್ತು ಚುನಾವಣೆ ವೆಚ್ಚ ತಂಡದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

ಆಯಾ ತಂಡದವರು ತಮಗೆ ವಹಿಸಿದ ಕೆಲಸವನ್ನು ಗಂಭೀರವಾಗಿ ಪರಿಗಣಿಸಿ, ಕರ್ತವ್ಯ ನಿರ್ವಹಿಸಬೇಕು. ವಹಿಸಿದ ಕೆಲಸದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ್‌ ಅವರು ಮಾತನಾಡಿ, ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ 28 ಕಡೆಗಳಲ್ಲಿ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಕಾನೂನು ಹಾಗೂ ಶಾಂತಿಯುತ ಚುನಾವಣೆ ನಡೆಸುವ ದೃಷ್ಟಿಯಿಂದಾಗಿ ಚೆಕ್‌ ಪೋಸ್ಟ್‌ಗಳ ಮೂಲಕ ಸಂಚರಿಸುವ ಪ್ರತಿ ವಾಹನವನ್ನು ತಪಾಸಣೆಗೊಳಪಡಿಸಲಾಗುತ್ತಿದೆ ಎಂದರು.

ಚುನಾವಣೆ ನೀತಿ ಸಂಹಿತೆ ಮುಗಿಯುವವರೆಗೂ ಈ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಅತ್ಯಂತ ಎಚ್ಚರದಿಂದ ಮಾಡಬೇಕು. ವಾಹನ ಪರಿಶೀಲನೆ ವೇಳೆ ವಸ್ತುಗಳು, ಹಣಕ್ಕೆ ಸರಿಯಾದ ದಾಖಲೆ ಪತ್ರಗಳಿರದಿದ್ದರೆ ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆರ್‌.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಸೀಲ್ದಾರಗಳು ಹಾಗೂ ವಿವಿಧ ತಂಡಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ