ಆ್ಯಪ್ನಗರ

ಸಿದ್ದರಾಮಯ್ಯ ಜಾತಿ ವಿಭಜಕ: ಬಿಜೆಪಿ ಟ್ವೀಟ್‌ ದಾಳಿ

ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ.

Vijaya Karnataka Web 25 Oct 2021, 4:25 pm
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾತಿ ವಿಭಜಕ. ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ ಎಂದು ಬಿಜೆಪಿ ಆರೋಪಿಸಿದೆ.
Vijaya Karnataka Web ಬಿಜೆಪಿ
ಬಿಜೆಪಿ


ಈ ಕುರಿತಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ? ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ.

ಸಾಲ ಮಾಡಿಯಾದ್ರೂ ತುಪ್ಪ ತಿನ್ನಬೇಕೆಂಬ ಮಜಾವಾದಿ ಸಿದ್ದರಾಮಯ್ಯ: ಬಿಜೆಪಿ ವ್ಯಂಗ್ಯ

ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ ಎಂದಿದೆ.

ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ ಎಂದಿದೆ.

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು.
ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು.ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಸಿದ್ದರಾಮಯ್ಯನವರೇ, ಇದು ಸಮಾಜ ವಿಭಜನೆಯಲ್ಲವೇ ?
ಬಿಜೆಪಿ ಸೂಟ್‌ಕೇಸ್ ಪಡೆದು ಮುಸ್ಲಿಮರಿಗೆ ಟಿಕೆಟ್ ಕೊಟ್ಟಿದ್ದಾರೆ: ಎಚ್‌ಡಿಕೆ ವಿರುದ್ಧ ಜಮೀರ್ ಆರೋಪ
ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಪತ್ರಕರ್ತರಿಗೆ ಮಾತ್ರ ಮಾಧ್ಯಮ ಕಿಟ್ ಒದಗಿಸಲು ಆದೇಶ.ಅಲ್ಪಸಂಖ್ಯಾತರ ಒಡೆತನದ ಪತ್ರಿಕೆಗಳಿಗೆ ಜಾಹಿರಾತು ನೀಡಬೇಕು ಎಂದು ಸುತ್ತೋಲೆ. ಇವೆಲ್ಲ ನಿಮ್ಮ ಸಾಧನೆಯಲ್ವೇ ಸಿದ್ದರಾಮಯ್ಯ? ಎಂದು ಪ್ರಶ್ನಿಸಿದೆ.

ಸಮಾಜದ ಎಲ್ಲ ಜಾತಿ ಸಮುದಾಯದ ಜನರನ್ನು ಒಟ್ಟಾಗಿ ಕರೆದುಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಫುಲ್‌ ಟಾಂಗ್‌ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ