ಆ್ಯಪ್ನಗರ

ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸೂಚನೆ

ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.

Vijaya Karnataka 1 Nov 2018, 5:00 am
ಚಾಮರಾಜನಗರ : ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.
Vijaya Karnataka Web
ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸೂಚನೆ


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ನಾನಾ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಉಸ್ತುವಾರಿ ಸಚಿವರು, ನಗರದ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು ಬರದಂತೆ ಕೆಲಸ ನಿರ್ವಹಣೆ ಮಾಡಬೇಕು. ನಾನಾ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಸ್ಟೆಲ್‌, ಶಾಲಾ ಕೊಠಡಿಗಳು, ಸಮುದಾಯ ಭವನಗಳು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಸುಸೂತ್ರವಾಗಿ ಸಾಗುತ್ತಿದೆಯೆ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು.

ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವನ್ನು ನೂತನವಾಗಿ ನಿರ್ಮಿಸಬೇಕಿದೆ. ನಿವೇಶನ ಹಸ್ತಾಂತರ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳಬೇಕು. ಇತರೆ ಇಲಾಖೆಗಳು ಅಭಿವೃದ್ಧಿ ಕಾಮಗಾರಿ ಸಂಬಂಧ ನಿವೇಶನಗಳು ಅಗತ್ಯವಿದ್ದರೆ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ಕ್ರಮ ವಹಿಸಬೇಕು ಎಂದರು.

ಈಗಾಗಲೇ ಅಭಿವೃದ್ಧಿ ಯೋಜನೆ, ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದಲ್ಲಿ ಸದರಿ ಕಾಮಗಾರಿ ಆರಂಭಿಸಲು ಅವಶ್ಯ ಇರುವ ಆಡಳಿತಾತ್ಮಕ ಮಂಜೂರಾತಿ, ಅನುಮೋದನೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಇಲಾಖಾ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಗಾ ವಹಿಸಬೇಕು. ಪ್ರತಿ ಕಾರ್ಯಕ್ರಮದ ಬಗ್ಗೆಯೂ ಸೂಕ್ತ ಮಾಹಿತಿ ಹೊಂದಿರಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ