ಆ್ಯಪ್ನಗರ

ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಸಲಹೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‌ಕುಮಾರ್‌ ಸಲಹೆ ನೀಡಿದರು.

Vijaya Karnataka 18 Nov 2018, 5:00 am
ಚಾಮರಾಜನಗರ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‌ಕುಮಾರ್‌ ಸಲಹೆ ನೀಡಿದರು.
Vijaya Karnataka Web
ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಸಲಹೆ


ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಕುಟುಂಬಗಳು ಉದ್ಯೋಗಕ್ಕಾಗಿ ಬೇರೆಕಡೆ ವಲಸೆ ಹೋಗುವುದನ್ನು ತಪ್ಪಿಸಿ ಸ್ಥಳಿಯವಾಗಿ ಉದ್ಯೋಗ ಅವಕಾಶ ಒದಗಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆ ಜಾರಿಗೆ ತರಲಾಗಿದೆ.

ಕೆಲಸ ನಿರ್ವಹಿಸಿದ ಪುರುಷ ಮಹಿಳೆಯರಿಗೆ ಸರಿಸಮಾನವಾಗಿ ದಿನವೊಂದಕ್ಕೆ 249 ರೂ ಗಳನ್ನು ಪಾವತಿ ಮಾಡಲಾಗುತ್ತದೆ. ಈ ಯೋಜನೆ ಉಪಯುಕ್ತವಾಗಿದ್ದು ಗ್ರಾಮೀಣ ಕುಟುಂಬಗಳು ಪ್ರಯೋಜನ ಪಡೆಯಲು ಮುಂದಾಗಬೇಕೆಂದರು.

ಯೋಜನೆಯಡಿ ವೈಯಕ್ತಿಕ ಕಾಮಗಾರಿ ನಿರ್ವಹಿಸಲು ಸಹ ಅನುಕೂಲ ಕಲ್ಪಿಸಲಾಗಿದೆ. ಬದು ನಿರ್ಮಾಣ. ಕೃಷಿ ಹೊಂಡ, ದನದ ಕೊಟ್ಟಿಗೆ, ಕುರಿ- ಮೇಕೆ. ಕೋಳಿಶೆಡ್‌,ಎರೆಹುಳು ಗೊಬ್ಬರ ತೊಟ್ಟಿ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.

ತೋಟಗಾರಿಕೆ ಅಭಿವೃದ್ಧಿಗೂ ಯೋಜನೆಯಡಿ ಸಾಕಷ್ಟು ಅವಕಾಶಗಳಿವೆ. ತೆಂಗು, ಬಾಳೆ. ಅಡಿಕೆ. ಪಪ್ಪಾಯ, ನುಗ್ಗೆ, ನಿಂಬೆ, ಸೀಬೆ, ದಾಳಿಂಬೆ, ಮಾವು, ಇತರೆ ಆದಾಯ ತರುವ ಬೆಳೆಯನ್ನು ತಮ್ಮ ತಮ್ಮ ಜಮೀನಿನಲ್ಲಿಯೇ ಬೆಳೆಯಲು ಅಗತ್ಯ ಇರುವ ನೆರವು ನೀಡಲಾಗುತ್ತದೆ ಅಲ್ಲದೆ ರೇಷ್ಮೆ ಬೆಳೆಗೂ ಅವಶ್ಯ ಇರುವ ಸೌಲಭ್ಯಗಳನ್ನು ಯೋಜನೆಯಡಿ ಒದಗಿಸಲಾಗುತ್ತದೆ ಎಂದರು.

ಅರಣ್ಯ ಇಲಾಖೆಯೂ ಕೂಡ ರೈತರ ಜಮೀನುಗಳಲ್ಲಿ ಹೆಬ್ಬೇವು, ಸಿಲ್ವರ್‌, ಹೊಂಗೆ, ಹುಣಸೆ ಯಂತಹ ಆದಾಯ ತರುವ ಮರಗಳನ್ನು ಬೆಳೆಸಲು ಅವಕಾಶ ಕಲ್ಪಿಸಿದೆ. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ವೇಳೆ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 90 ಮಾನವ ದಿನಗಳ ಉದ್ಯೋಗ ಪಡೆಯಲು ಉದ್ಯೋಗ ಖಾತರಿ ಯೋಜನೆಯಡಿ ಅವಕಾಶ ಮಾಡಿಕೊಡಲಾಗಿದೆ. ಉದ್ಯೋಗ ಖಾತರಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗಳಲ್ಲಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪದ್ಮಶೇಖರ್‌ಪಾಂಡೆ, ಗುಂಡ್ಲುಪೇಟೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ, ನರೇಗಾ ಜಿಲ್ಲಾ ಸಂಯೋಜಕರಾದ ಮಲ್ಲಿಕಾರ್ಜುನ್‌, ಎಸ್‌. ನವೀನ್‌ಕುಮಾರ್‌, ಎನ್‌ಆರ್‌ಎಲ್‌ಎಂ ವ್ಯವಸ್ಥಾಪಕರಾದ ದೀಪಕ್‌, ಗೋವಿಂದರಾಜು ಇತರರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ