ಆ್ಯಪ್ನಗರ

ನಗರದಲ್ಲಿ ಏಡ್ಸ್‌ ಜಾಗೃತಿ ಜಾಥಾ

ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಏಡ್ಸ್‌ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

Vijaya Karnataka 2 Dec 2018, 5:00 am
ಚಾಮರಾಜನಗರ : ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಏಡ್ಸ್‌ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
Vijaya Karnataka Web aids awareness jatha in the city
ನಗರದಲ್ಲಿ ಏಡ್ಸ್‌ ಜಾಗೃತಿ ಜಾಥಾ


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿ.ಪಂ. ಅಧ್ಯಕ್ಷೆ ಶಿವಮ್ಮ ಜಾಥಾಕ್ಕೆ ಚಾಲನೆ ನೀಡಿದರು.

ಸರಕಾರಿ ಶುಶ್ರೂಷಕರ ಶಾಲೆಯ ಶುಶ್ರೂಷಕ ವಿದ್ಯಾರ್ಥಿಗಳು ಸ್ನೇಹಜ್ಯೋತಿ ಮಹಿಳಾ ಸ್ವ ಸಹಾಯ ಸಂಘ, ಸಮತಾ ಸೊಸೈಟಿ ಪದಾಧಿಕಾರಿಗಳು ಭಾಗವಹಿಸಿ ಏಡ್ಸ್‌ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ಕುರಿತು ಭಿತ್ತಿಪತ್ರಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಜಾಗೃತಿ ಜಾಥಾ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಮುಕ್ತಾಯಗೊಂಡಿತು.

ಜಾಥಾ ಸಾಗುವ ಮಾರ್ಗದುದ್ದಕ್ಕು ಏಡ್ಸ್‌ ಕುರಿತ ಜಾಗೃತಿಗೀತೆಗಳನ್ನು ಹಾಡಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಮಹದೇವು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್‌.ಪ್ರಸಾದ್‌, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌, ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ