ಆ್ಯಪ್ನಗರ

ಬಂಡೀಪುರ ಬೆಂಕಿ ಶಮನ

ಬಂಡೀಪುರ ರಾಷ್ಟ್ರೀಯ ಉದ್ಯಾನದ ಕುಂದಕೆರೆ ಅರಣ್ಯ ವಲಯದಲ್ಲಿ ಗುರುವಾರ ಸಂಜೆ ಕಾಣಿಸಿಕೊಂಡಿದ್ದ ಬೆಂಕಿ ಸಂಪೂರ್ಣವಾಗಿ ತಹಬದಿಗೆ ಬಂದಿದೆ ಎಂದು ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ತಿಳಿಸಿದ್ದಾರೆ.

Vijaya Karnataka 16 Mar 2019, 5:00 am
ಗುಂಡ್ಲುಪೇಟೆ : ಬಂಡೀಪುರ ರಾಷ್ಟ್ರೀಯ ಉದ್ಯಾನದ ಕುಂದಕೆರೆ ಅರಣ್ಯ ವಲಯದಲ್ಲಿ ಗುರುವಾರ ಸಂಜೆ ಕಾಣಿಸಿಕೊಂಡಿದ್ದ ಬೆಂಕಿ ಸಂಪೂರ್ಣವಾಗಿ ತಹಬದಿಗೆ ಬಂದಿದೆ ಎಂದು ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ತಿಳಿಸಿದ್ದಾರೆ.
Vijaya Karnataka Web bandipur fire relief
ಬಂಡೀಪುರ ಬೆಂಕಿ ಶಮನ


ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಖಾಸಗಿ ಜಮೀನಿನಿಂದ ಬಂದ ಬೆಂಕಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ವೀರೇಶ್ವರ ಗುಡ್ಡ ಅರಣ್ಯ ಪ್ರದೇಶಕ್ಕೆ ವ್ಯಾಪಿಸಿತ್ತು. ಬಂಡೀಪುರ ಮತ್ತು ಗುಂಡ್ಲುಪೇಟೆ ಉಪವಿಭಾಗದ ಎಸಿಎಫ್‌ಗಳಾದ ರವಿಕುಮಾರ್‌, ನಟರಾಜು, ಕುಂದಕೆರೆ, ಬಂಡೀಪುರ, ಜಿ.ಎಸ್‌.ಬೆಟ್ಟ, ಮದ್ದೂರು, ಓಂಕಾರ ಹಾಗೂ ಮೊಳೆಯೂರು ವಲಯಾರಣ್ಯಾಧಿಕಾರಿಗಳಾದ ಶ್ರೀನಿವಾಸ್‌, ಮಂಜುನಾಥ್‌, ಪುಟ್ಟಸ್ವಾಮಿ, ಶæೖಲೇಂದ್ರ ಕುಮಾರ್‌, ನವೀನ್‌ಕುಮಾರ್‌ ಮತ್ತು ನೌಕರರು, ಬೆಂಕಿ ವಾಚರ್‌ಗಳು ಕೂಡಲೇ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 30 ಎಕರೆಯಷ್ಟು ಅರಣ್ಯ ಪ್ರದೇಶದಲ್ಲಿ ನೆಲಬೆಂಕಿ ವ್ಯಾಪಿಸಿತ್ತು. ವನ್ಯಜೀವಿ ಸಂಪತ್ತಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ