ಆ್ಯಪ್ನಗರ

ಉಪಾಹಾರ ಸೇವಿಸಿದ 42 ವಿದ್ಯಾರ್ಥಿಗಳು ಅಸ್ವಸ್ಥ, ಚೇತರಿಕೆ

ತಾಲೂಕಿನ ಮೆಳ್ಳಹಳ್ಳಿ ಗೇಟ್‌ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರ ಸೇವಿಸಿದ 42 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Vijaya Karnataka 9 Sep 2018, 7:43 am
ಯಳಂದೂರು: ತಾಲೂಕಿನ ಮೆಳ್ಳಹಳ್ಳಿ ಗೇಟ್‌ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರ ಸೇವಿಸಿದ 42 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
Vijaya Karnataka Web Food Poison


ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಈ ವಸತಿ ಶಾಲೆಯಲ್ಲಿ 6ರಿಂದ 7ನೇ ತರಗತಿಗಳು ಪ್ರಾರಂಭವಾಗಿದ್ದು, ಎಂದಿನಂತೆ ಶನಿವಾರ ಬೆಳಗ್ಗೆ ಮಕ್ಕಳಿಗೆ ಉಪ್ಪಿಟ್ಟು ಮತ್ತು ಕೆಸರಿಬಾತ್‌ ಮಾಡಲಾಗಿತ್ತು. ಇದನ್ನು ಸೇವಿಸಿದ ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ತಕ್ಷ ಣ ವಸತಿ ಶಾಲೆಯಲ್ಲಿನ ಶಿಕ್ಷ ಕರು ಅಸ್ವಸ್ಥಗೊಂಡ 32 ಮಕ್ಕಳನ್ನು ಯಳಂದೂರು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೆ, 10 ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ವಿದ್ಯಾರ್ಥಿನಿಯರು ಇದೀಗ ಚೇತರಿಸಿಕೊಂಡಿದ್ದಾರೆ.

ವಸತಿ ಶಾಲೆಯಲ್ಲಿ ಅಡುಗೆ ಮಾಡುವ ಇಬ್ಬರ ನಡುವೆ ಆಗಾಗ ಸಣ್ಣ, ಪುಟ್ಟ ವಿಚಾರಗಳಿಗೆ ಗಲಾಟೆ ನಡೆಯುತ್ತಿದ್ದು, ಈ ವಿಚಾರ ಅಡುಗೆ ಮೇಲೂ ಪರಿಣಾಮ ಬೀರಿರಬಹುದು. ಆಹಾರದಲ್ಲಿ ಏನೋ ವ್ಯತ್ಯಾಸವಾಗಿ ಹೀಗಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ವಿಷಯ ತಿಳಿದ ಸಂಸದ ಆರ್‌.ಧ್ರುವನಾರಾಯಣ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಅಡುಗೆ ಸಹಾಯಕಿಯನ್ನು ಕೆಲಸದಿಂದ ವಜಾಗೊಳಿಸುವಂತೆ ಮನವಿ ಮಾಡಿ, ವಿದ್ಯಾರ್ಥಿನಿಯರು ಕಣ್ಣೀರು ಹಾಕಿದರು. ನಂತರದಲ್ಲಿ ಶಿಕ್ಷ ಣ ಸಚಿವ ಎನ್‌.ಮಹೇಶ್‌ ಆಸ್ಪತ್ರಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರಲ್ಲದೇ ಆಹಾರದಲ್ಲಾಗಿರುವ ವ್ಯತ್ಯಾಸಕ್ಕೆ ಹೊಣೆಯಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಸತಿ ಶಾಲೆ ಪ್ರಾಂಶುಪಾಲ ಮಹದೇವಸ್ವಾಮಿ ಮತ್ತು ನಾಗರಾಜು ಅವರನ್ನು ತರಾಟೆ ತಗೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರೂ ಶಾಲೆಗೆ ಭೇಟಿ ನೀಡಿ ಶಿಸ್ತು ಕಾಪಾಡಿಕೊಳ್ಳುವಂತೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ