ಆ್ಯಪ್ನಗರ

ಬಿಜೆಪಿ ಸೇರಲಾರೆ: ಎನ್‌.ಮಹೇಶ್‌

ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ಬಿಜೆಪಿ ಸರಕಾರದ ಮಂತ್ರಿ ಮಂಡಲವನ್ನೂ ಸೇರುವುದಿಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್‌.ಮಹೇಶ್‌ ಹೇಳಿದರು.

Vijaya Karnataka 5 Aug 2019, 5:00 am
ಚಾಮರಾಜನಗರ: ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ಬಿಜೆಪಿ ಸರಕಾರದ ಮಂತ್ರಿ ಮಂಡಲವನ್ನೂ ಸೇರುವುದಿಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್‌.ಮಹೇಶ್‌ ಹೇಳಿದರು.
Vijaya Karnataka Web cannot join to bjp n mahesh
ಬಿಜೆಪಿ ಸೇರಲಾರೆ: ಎನ್‌.ಮಹೇಶ್‌


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ''ಬಿಎಸ್ಪಿ ವರಿಷ್ಠೆ ಮಾಯಾವತಿ ಅವರು ಮಾಹಿತಿ ಕೊರತೆಯಿಂದ ನನ್ನನ್ನು ಪಕ್ಷ ದಿಂದ ಉಚ್ಚಾಟನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅದು ಸರಿ ಹೋಗಲಿದೆ. ನಾನು ಸ್ವತಂತ್ರವಾಗಿದ್ದೇನೆ, ಸ್ವತಂತ್ರವಾಗಿಯೇ ಕ್ಷೇತ್ರದ ಕೆಲಸ ಮಾಡುತ್ತೇನೆ. ನನ್ನ ಮೇಲೆ ಬರುತ್ತಿರುವ ಆರೋಪಗಳೆಲ್ಲ ಸುಳ್ಳು. ನಾನು ಯಾವ ಪಕ್ಷ ಕ್ಕೂ ಸಹಾಯ ಮಾಡಿಲ್ಲ. ಮಾಯಾವತಿ ಅವರ ಆದೇಶದ ಮೇರೆಗೆ ತಟಸ್ಥವಾಗಿದ್ದೆ. ಆದರೆ ನಾನು ಹಣ ತೆಗೆದುಕೊಂಡಿದ್ದೇನೆ,''ಎಂದು ಸುದ್ದಿ ಹಬ್ಬಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

''ನನಗೆ ಯಾವ ಪಕ್ಷ ದ ಸಹಾಯವೂ ಬೇಡ. ಪ್ರಸ್ತುತ ಬಿಜೆಪಿ ಸರಕಾರವಿದ್ದು, ಅವರಿಂದ ನನ್ನ ಕ್ಷೇತ್ರದ ಕೆಲಸ ಮಾಡಿಸಿಕೊಳ್ಳುತ್ತೇನೆ. ಆದರೆ, ಹಿಂದಿನ ಮೈತ್ರಿ ಸರಕಾರ ನನ್ನ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ನಾನು ಕೇಳಿದಷ್ಟು ಅನುದಾನವನ್ನೂ ನೀಡಲಿಲ್ಲ,''ಎಂದು ಮಹೇಶ್‌ ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ