ಆ್ಯಪ್ನಗರ

ಅರಣ್ಯ ಸಂರಕ್ಷಣೆಗೆ ಇಲಾಖೆ ಜತೆ ಸಹಕರಿಸಿ

ಅರಣ್ಯ ಸಂರಕ್ಷಣೆಯ ಜತೆಗೆ ಪರಿಸರವನ್ನು ಉತ್ತಮಪಡಿಸುವ ಬಗ್ಗೆ ಪೋಷಕರಿಗೆ ಮನದಟ್ಟು ಮಾಡುವ ಮೂಲಕ ಪ್ರತಿಯೊಬ್ಬರೂ ಅರಣ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಎಫ್‌ಒ ಏಡುಕುಂಡಲು ಮನವಿ ಮಾಡಿದರು.

Vijaya Karnataka 19 Sep 2019, 5:00 am
ಹನೂರು: ಅರಣ್ಯ ಸಂರಕ್ಷಣೆಯ ಜತೆಗೆ ಪರಿಸರವನ್ನು ಉತ್ತಮಪಡಿಸುವ ಬಗ್ಗೆ ಪೋಷಕರಿಗೆ ಮನದಟ್ಟು ಮಾಡುವ ಮೂಲಕ ಪ್ರತಿಯೊಬ್ಬರೂ ಅರಣ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಎಫ್‌ಒ ಏಡುಕುಂಡಲು ಮನವಿ ಮಾಡಿದರು.
Vijaya Karnataka Web CHN18HNR4_18


ತಾಲೂಕಿನ ಮಂಗಲ ಸರಕಾರಿ ಪ್ರೌಢಶಾಲೆ ಆವರಣದಲ್ಲಿಹಮ್ಮಿಕೊಂಡಿದ್ದ ವೃಕ್ಷೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ವನ್ಯಜೀವಿಗಳನ್ನು ರಕ್ಷಿಸುವ ಕೆಲಸವನ್ನು ಮಕ್ಕಳು ವಿದ್ಯಾರ್ಥಿ ದಿಸೆಯಿಂದಲೇ ಮೈಗೂಡಿಸಿಕೊಳ್ಳಬೇಕು. ಮಾನವ ಇಂದು ತನ್ನ ಸ್ವಾರ್ಥಕ್ಕಾಗಿ ಅರಣ್ಯದಲ್ಲಿನ ಮರಗಳನ್ನು ಕಡಿಯುತ್ತಾ ಬರುತ್ತಿರುವುದರ ಪರಿಣಾಮ ಅರಣ್ಯ ಸಂಪತ್ತನ್ನು ಕ್ಷೀಣಿಸುತ್ತಿದೆ. ಮಕ್ಕಳು ತಮ್ಮ ಪೋಷಕರು ಸೇರಿದಂತೆ ತಮ್ಮ ನೆರೆ ಹೊರೆಯವರಿಗೆ ಪರಿಸರ ರಕ್ಷಣೆ ಮಾಡುವ ಕುರಿತು ಮನವರಿಕೆ ಮಾಡಿಕೊಡಬೇಕು. ವನ್ಯಜೀವಿ ಸಂಕುಲ ಹಾಗೂ ಪರಿಸರ ನಾಶದಿಂದ ನಾವು ಮುಂದಿನ ದಿನಗಳಲ್ಲಿತೊಂದರೆಗೆ ಸಿಲುಕಬೇಕಾಗುತ್ತದೆ. ಪ್ರತಿಯೊಬ್ಬರು ಸಸಿ ನೆಟ್ಟು ಅದನ್ನು ಪೋಷಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿಆರ್‌ಎಫ್‌ಒ ಸುಂದರ್‌, ಡಿಆರ್‌ಎಫ್‌ಒ ಸಾಲನ್‌, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ