ಆ್ಯಪ್ನಗರ

ಇ-ಆಫೀಸ್ ಕಡ್ಡಾಯ ಬಳಕೆಗೆ ಸೂಚನೆ

ಡಿಜಿಟಲೀರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇ-ಆಫೀಸ್ ಅನ್ನು ಕಡ್ಡಾಯ ಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಎಲ್ಲಾ ಇಲಾಖೆಗಳ ಕೆಲಸ- ಕಾರ್ಯಗಳು ಇ-ಆಫೀಸ್ ನಲ್ಲಿಯೇ ನಿರ್ವಹಣೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 17 Dec 2019, 9:34 pm
ಚಾಮರಾಜನಗರ: ಡಿಜಿಟಲೀರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇ-ಆಫೀಸ್ ಅನ್ನು ಕಡ್ಡಾಯ ಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಎಲ್ಲಾ ಇಲಾಖೆಗಳ ಕೆಲಸ- ಕಾರ್ಯಗಳು ಇ-ಆಫೀಸ್ ನಲ್ಲಿಯೇ ನಿರ್ವಹಣೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web ಚಾಮರಾಜನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ನಾನಾ ಇಲಾಖೆ  ಅಧಿಕಾರಿಗಳ ಸಭೆ ನಡೆಸಿದರು.


ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕೆಡಿಪಿ ಸಭಾಂಗಣದ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರದ ಸೂಚನೆಯಂತೆ ಸರಕಾರಿ ಕಚೇರಿಗಳ ಎಲ್ಲಾ ಇಲಾಖೆಗಳು ಇ-ಆಫೀಸ್ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಇದರಿಂದ ಸಮಯ ಉಳಿಯುವುದಲ್ಲದೇ, ಕೆಲಸಗಳು ಶೀಘ್ರವಾಗಿ ಪೂರ್ಣ ಗೊಳ್ಳಲಿವೆ. ಹೀಗಾಗಿ ಕಾರ್ಯಾಗಾರ ಆಯೋಜಿಸಿ, ಎಲ್ಲಾ ಅಧಿಕಾರಿಗಳಿಗೆ ಇ- ಆಫೀಸ್ ನಿರ್ವಹಿಸುವ ಬಗೆಗೆ ತರಬೇತಿ ನೀಡಬೇಕು. ಅಲ್ಲದೇ ಪ್ರತಿಯೊಂದು ಇಲಾಖೆ ಗಳಲ್ಲೂ ಇ-ಆಫೀಸ್ ತ್ವರಿತ ಜಾರಿಯಾಗಬೇಕು ಎಂದರು.

ಕೃಷಿ ಇಲಾಖೆಯ ಯೋಜನೆಗಳ ಅನುಷ್ಠಾನ ದ ಕುರಿತು ಪರಿಶೀಲಿಸಿದ ಕಠಾರಿ ಯಾ ಅವರು ರೈತರಿಗೆ ಸರಕಾರಿ ಯೋಜನೆಗಳ ಸೌಲಭ್ಯ ದೊರೆಯುವಂತಾಗಲು, ಬ್ಯಾಂಕ್ ಅಕೌಂಟ್‌ಗೆ ಆಧಾರ್ ಲಿಂಕ್ ಆಗಿರುವುದು ಅವಶ್ಯ.

ಹೀಗಾಗಿ ಜಿಲ್ಲೆಯ ಪ್ರತಿಯೊಬ್ಬ ರೈತರು ತಮ್ಮ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಕುರಿತು ಪರಿಶೀಲನೆ ನಡೆಸಬೇಕು. ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರು ವಿಶೇಷ ಗಮನ ತೆಗೆದುಕೊಂಡು ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೋಂದಣಿಯಾಗದ ಜಿಲ್ಲೆಯ ರೈತರನ್ನು ಗುರುತಿಸಿ, ಅವರನ್ನು ಯೋಜನೆಯಡಿ ಸೇರುವಂತೆ ಮಾಡಬೇಕು. ಜತೆಗೆ ಯೋಜನೆಯಲ್ಲಿ ತಿರಸ್ಕೃತವಾದ ಅರ್ಜಿದಾರರಿಗೆ ಅಗತ್ಯ ಮಾರ್ಗದರ್ಶನ ನೀಡಿ ಮತ್ತೊಮ್ಮೆ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ ಮತ್ತು ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಗುರಿ ಅನ್ವಯ ಸಾಧನೆ ಮುಖ್ಯವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಪ್ರತೀ ಇಲಾಖೆಗಳು ನಿಗದಿಪಡಿಸಲಾಗಿರುವ ಗುರಿ ಅನ್ವಯ ಸಾಧನೆ ಮಾಡಬೇಕು. ನಿಗದಿತ ಗುರಿಗಿಂತ ಕಡಿಮೆ ಸಾಧನೆ ಮಾಡಿರುವ ಇಲಾಖೆಗಳ ಬಗ್ಗೆ ವಿಶೇಷ ಒತ್ತು ನೀಡಿ ಕಾರ್ಯಕ್ರಮಗಳ ಪರಾಮರ್ಶೆ ಮಾಡಬೇಕು. ಶೇ.100ರಷ್ಟು ಗುರಿ ತಲುಪಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ಕುಮಾರ್ ಕಠಾರಿಯಾ ಸೂಚಿಸಿದರು.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜದ ದಾಸ್ತಾನು, ವಿತರಣೆ ಹಾಗೂ ರಸಗೊಬ್ಬರ ಲಭ್ಯತೆ, ಕುಡಿಯುವ ನೀರಿನ ವ್ಯವಸ್ಥೆ, ಅಂತರ್ಜಲ ಮಟ್ಟ, ಕೆರೆ ತುಂಬುವ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಇತರೆ ಇಲಾಖೆಗಳ ಕಾರ್ಯಕ್ರಮಗಳ ಪರಾಮರ್ಶೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ