ಆ್ಯಪ್ನಗರ

ಕಲುಷಿತ ನೀರು ಸೇವಿಸಿ ಕಾಡಾನೆ ಸಾವು

ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಕಲುಷಿತ ನೀರು ಕುಡಿದು 40 ವರ್ಷದ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Vijaya Karnataka 11 Sep 2019, 5:00 am
ಹನೂರು: ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಕಲುಷಿತ ನೀರು ಕುಡಿದು 40 ವರ್ಷದ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Vijaya Karnataka Web elephant death by consumption of contaminated water
ಕಲುಷಿತ ನೀರು ಸೇವಿಸಿ ಕಾಡಾನೆ ಸಾವು


ಹನೂರು ವನ್ಯಜೀವಿ ವಲಯದ ಕೊತ್ತಗುಳಿ ಬೀಟ್‌ನಲ್ಲಿ ಮೂರು ದಿನಗಳ ಹಿಂದೆ ಈ ಆನೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಮುತ್ತೇಗೌಡ, ವಲಯ ಅರಣ್ಯಾಧಿಕಾರಿ ಸುಂದರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯದಲ್ಲೇ ಸುಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ