ಆ್ಯಪ್ನಗರ

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಭೆ ಸಹಕಾರಿ

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸಹಕಾರಿಯಾಗಲಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಂಕರ್‌ ಹೇಳಿದರು.

Vijaya Karnataka 26 Sep 2019, 5:00 am
ಸಂತೇಮರಹಳ್ಳಿ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸಹಕಾರಿಯಾಗಲಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಂಕರ್‌ ಹೇಳಿದರು.
Vijaya Karnataka Web CHN25SMR2_18


ಸಮೀಪದ ಗೂಳಿಪುರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಗ್ರಾಮೀಣ ಅಭಿವೃದ್ದಿ, ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ‍್ಯಕ್ರಮಗಳ ಸಂಯುಕ್ತ ಆಶ್ರಯದಲ್ಲಿನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿದರು.

''ಹಿಂದೆ ಶಾಸಕರ ಅಧ್ಯಕ್ಷತೆಯಲ್ಲಿತಾಲೂಕು ಮಟ್ಟದಲ್ಲಿಮಾತ್ರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿತ್ತು. ಈಗ ಸರಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿತಿಂಗಳಿಗೊಮ್ಮೆ ಕಡ್ಡಾಯವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿಸಭೆ ನಡೆಸಬೇಕು ಎಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿಈ ಕಾರ‍್ಯಕ್ರಮವನ್ನು ಆಯೋಜನೆ ಮಾಡಲಾಗಿದೆ,'' ಎಂದರು.

''ಇತಂಹ ಕಾರ‍್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ವಿಸ್ತರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿಯಾಗಲು ಬೇಕಾದ ಕಾಮಗಾರಿಗಳನ್ನು ಅಧಿಕಾರಿಗಳಿಂದ ಮಾಹಿತಿ ಹಾಗೂ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸೂಕ್ತ ಪರಿಹಾರ ದೊರಕಲು ಅನುಕೂಲವಾಗುತ್ತದೆ,''ಎಂದು ಹೇಳಿದರು.

''ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಬೂದಂಬಳ್ಳಿಮೋಳೆ, ಬೂದಂಬಳ್ಳಿ, ಹೆಗ್ಗಡೆಹುಂಡಿ, ಗೂಳಿಪುರ, ಕೋಟಂಬಳ್ಳಿ ಸೇರಿದಂತೆ 5 ಗ್ರಾಮಗಳಲ್ಲಿಪ್ರತಿ ತಿಂಗಳಿಗೊಮ್ಮೆ ಒಂದೊಂದು ಗ್ರಾಮಗಳಲ್ಲಿತ್ರೈಮಾಸಿಕ ಸಭೆ ಆಯೋಜನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿತಾಲೂಕು ಮಟ್ಟದ ಎಲ್ಲಾಇಲಾಖೆ ಅಧಿಕಾರಿಗಳಿಗೆ ಸರಕಾರದಿಂದ ದೊರಕುವ ಸೌಲಭ್ಯ ಕುರಿತು ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗುತ್ತದೆ,'' ಎಂದು ತಿಳಿಸಿದರು.

ಗ್ರಾ.ಪಂ.ಅಧ್ಯಕ್ಷೆ ದೊಡ್ಡತಾಯಮ್ಮ, ಗ್ರಾ.ಪಂ.ಸದಸ್ಯರು, ಅಭಿವೃದ್ದಿ ಅಧಿಕಾರಿ ಸಿದ್ದರಾಜು ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ