ಆ್ಯಪ್ನಗರ

ಜಾಗೃತಿ ಮೂಡಿಸುವುದು ಯುವಕರ ಗುರಿಯಾಗಲಿ

ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜಾಗತಿ ಮೂಡಿಸುವುದು ಯುವಕರ ಗುರಿಯಾಗಬೇಕು ಎಂದು ಸ್ನೇಹ ಸ್ವಯಂ ಸೇವಾ ಸಂಸ್ಥೆ ಜಿಲ್ಲಾ ಸಂಯೋಜಕಿ ಲೀನಾಕುಮಾರಿ ಹೇಳಿದರು.

ವಿಕ ಸುದ್ದಿಲೋಕ 2 Jul 2016, 5:15 am
ಸಂತೇಮರಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜಾಗತಿ ಮೂಡಿಸುವುದು ಯುವಕರ ಗುರಿಯಾಗಬೇಕು ಎಂದು ಸ್ನೇಹ ಸ್ವಯಂ ಸೇವಾ ಸಂಸ್ಥೆ ಜಿಲ್ಲಾ ಸಂಯೋಜಕಿ ಲೀನಾಕುಮಾರಿ ಹೇಳಿದರು.
Vijaya Karnataka Web guriyagali awareness of youth
ಜಾಗೃತಿ ಮೂಡಿಸುವುದು ಯುವಕರ ಗುರಿಯಾಗಲಿ


ತಾಲೂಕಿನ ಚಂದಕವಾಡಿ ಗ್ರಾಮದ ಕ್ಲಸ್ಟರ್ ಸಂಪನ್ಮೂಲ ಕೇಂದ್ರದಲ್ಲಿ ನೆಹರು ಯುವ ಕೇಂದ್ರ, ಶ್ರೀಗಂಧ ಮಹಿಳಾ ಅಭಿವದ್ಧಿ ಸಂಘ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವತಿಯಿಂದ ನಡೆದ’ ನೆರೆಹೊರೆ ಯುವಸಂಸತ್ತು, ಕೇಂದ್ರ ಪುರಸ್ಕೃತ ಯೋಜನೆಗಳು, ಅನುಷ್ಠಾನ ದಲ್ಲಿ ಸಮುದಾಯ ಸಂಘಟನೆಗಳ ಪಾತ್ರ ಕುರಿತ ತರಬೇತಿ’ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಕಾರದ ಸ್ವಚ್ಛಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿ ಸುವಂತೆ ಜಾಗತಿ ಮೂಡಿಸುವುದು, ಉದ್ಯೋಗಖಾತ್ರಿ ಯೋಜನೆಯ ಜಾಬ್ ಕಾರ್ಡ್ ಮಾಡಿಸುವ ಕುರಿತು ಸಹಾಯ ಮಾಡುವುದು ಯುವ ಸಮುದಾಯದ ಕರ್ತವ್ಯವಾಗಬೇಕು ಎಂದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಮಹೇಶ್ ಮಾತನಾಡಿ, ಸಮಾಜದಲ್ಲಿರುವ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಪಾತ್ರ ದೊಡ್ಡದು, ಮೊದಲು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗ ಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ವತ್ತಿ ತರಬೇತಿದಾರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಆರೋಗ್ಯ ನಿರೀಕ್ಷಕ ನವೀನ್‌ಕುಮಾರ್, ಚಂದಕವಾಡಿ ಪಿಯು ಕಾಲೇಜು ಉಪನ್ಯಾಸಕ ಸತೀಶ್, ಮುಖ್ಯ ಶಿಕ್ಷಕ ಶಿವಮೂರ್ತಿ,ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಶಿವರಾಜಮ್ಮ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ