ಆ್ಯಪ್ನಗರ

ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಗೆ ಶಿಕ್ಷೆ

ಪತಿಯ ಕಿರುಕುಳ ತಾಳಲಾರದೇ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಚಾಮರಾಜನಗರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 3 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Vijaya Karnataka 9 Jan 2019, 5:00 am
ಚಾಮರಾಜನಗರ : ಪತಿಯ ಕಿರುಕುಳ ತಾಳಲಾರದೇ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಚಾಮರಾಜನಗರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 3 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
Vijaya Karnataka Web housewife committed suicide husband mother
ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಗೆ ಶಿಕ್ಷೆ


ಪತ್ನಿ ತ್ರಿವೇಣಿಗೆ ಗ್ರಾಮದ ಗೋಪಾಲಸ್ವಾಮಿ ಮತ್ತು ಆತನ ತಾಯಿ ಚಿನ್ನಮ್ಮ ಸೇರಿಕೊಂಡು ಆವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಪತಿ ಮತ್ತು ಅತ್ತೆಯ ಕಿರುಕುಳ ತಾಳಲಾರದೇ 2014 ಮಾ.29ರಂದು ರಾತ್ರಿ 7ರ ಸಮಯದಲ್ಲಿ ಮನೆಯ ದನದ ಕೊಟ್ಟಿಗೆಯಲ್ಲಿ ಆರೋಪಿ ಗೋಪಾಲಸ್ವಾಮಿ ಪತ್ನಿ ತ್ರಿವೇಣಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ 2014ರ ಏ.2ರಂದು ಮೃತಪಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತರ ಸಂಬಂಧಿಕರು ತೆರಕಣಾಂಬಿ ಠಾಣೆಯಲ್ಲಿ ದೂರು ನೀಡಿದ್ದರು.

ಮೃತರ ಪತಿ ಮತ್ತು ಅತ್ತೆ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾದ ಡಿ.ವಿನಯ್‌ ಆರೋಪಿಗಳಿಗೆ 3 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ