ಆ್ಯಪ್ನಗರ

ಬಂಡೀಪುರ ರಾತ್ರಿ ಸಂಚಾರ ತೆರವಿಗೆ ಕೇರಳಿಗರ ಪ್ರತಿಭಟನೆ

ಸುಲ್ತಾನ್‌ ಬತ್ತೇರಿಯಿಂದ ರಾಷ್ಟ್ರೀಯ 766ರಲ್ಲಿ ರಾಜ್ಯದ ಗಡಿ ಹತ್ತಿರವಿರುವ ಅಂಚೆ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದವರು ಅರೆಬೆತ್ತಲೆಯಾಗಿ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka Web 30 Sep 2019, 8:24 pm

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಆಗ್ರಹಿಸಿ ಕೇರಳದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಸೋಮವಾರ ರಾಜ್ಯದ ಗಡಿವರೆಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟಿಸಿದರು.
Vijaya Karnataka Web Bandipur


ಸುಲ್ತಾನ್‌ ಬತ್ತೇರಿಯಿಂದ ರಾಷ್ಟ್ರೀಯ 766ರಲ್ಲಿ ರಾಜ್ಯದ ಗಡಿ ಹತ್ತಿರವಿರುವ ಅಂಚೆ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದವರು ಅರೆಬೆತ್ತಲೆಯಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಬಳಿ ಸಮಾವೇಶಗೊಂಡು ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಬರುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಮಾಡಬೇಕು ಎಂದು ಆಗ್ರಹಿಸಿದರು.

ಬಂಡೀಪುರ ರಾತ್ರಿ ಸಂಚಾರಕ್ಕೆ ಆಗ್ರಹಿಸಿ ಕೇರಳದಲ್ಲಿ ಹರತಾಳ, ಅಂತಾರಾಜ್ಯ ಸಂಚಾರ ಸ್ತಬ್ಧ

ವಿವಿಧ ಪಕ್ಷ, ಸಂಘಟನೆಗಳ ಮುಖಂಡರು ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು. ಹೋರಾಟ ತೀವ್ರಗೊಳಿಸುವ ಸಂಬಂಧ ನಿರ್ಣಯಗಳನ್ನು ಕೈಗೊಂಡರು. ನಂತರ ವಯನಾಡು ಜಿಲ್ಲಾ ಎಸ್ಪಿ ಅವರಿಗೆ ಮನವಿ ಸಲ್ಲಿಸಿ ಅಲ್ಲಿಂದ ವಾಪಸ್ಸಾದರು.

ಇತ್ತೀಚೆಗೆ ಅಂದರೆ ಸೆಪ್ಟೆಂಬರ್‌ 26ರಂದು ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯಿಸಿ ಕೇರಳದಲ್ಲಿ ಒಂದು ದಿನ ಹರತಾಳ ನಡೆದಿತ್ತು. ಇದರಿಂದ ಅಂತರಾಜ್ಯ ಸಂಚಾರ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಇದಾದ ಬಳಿಕ ಕೇರಳಿಗರು ಮೇಲಿಂದ ಮೇಲೆ ರಾತ್ರಿ ಸಂಚಾರಕ್ಕೆ ಅವಕಾಶ ಕೋರಿ ಕೇಂದ್ರದ ಮೇಲೆ ವಿಪರೀತ ಒತ್ತಡ ಹೇರುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ