ಹನೂರು: ಕೆಎಸ್ಆರ್ಟಿಸಿ ಬಸ್, ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಲಿಂಗನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ. ತಾಲೂಕಿನ ಅಣಗಳ್ಳಿ ದೊಡ್ಡಿ ಗ್ರಾಮದ ನಿವಾಸಿ ಪ್ರಕಾಶ್ (26) ಮೃತಪಟ್ಟ ದುರ್ದೈವಿ.
ಘಟನೆ ವಿವರ
ಕ್ರಿಡಿಟ್ ಅಕ್ಸ್ಸ್ ಗ್ರಾಮೀಣ ಲಿಮಿಟೆಡ್ ಖಾಸಗಿ ಬ್ಯಾಂಕ್ನ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಸೋಮವಾರ ಮಂಗಲ, ಚೆನ್ನಲಿಂಗನಹಳ್ಳಿ ಗ್ರಾಮದಲ್ಲಿನ ಕೇಂದ್ರೀಯ ಸಂಘದ ಸದಸ್ಯರಿಂದ ಹಣ ಪಡೆದು ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಲೊಕ್ಕನಹಳ್ಳಿ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್ ಠಾಣೆಯ ವೃತ್ತನಿರೀಕ್ಷಕ ಸಂತೋಷ್ ಕಶ್ಯಪ್, ಪೇದೆಗಳಾದ ರಾಘವೇಂದ್ರ, ಬಿಳಿಗೌಡ ರಾಮ್ ಶೆಟ್ಟಿ ಇನ್ನೀತರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.