ಆ್ಯಪ್ನಗರ

ಲೋಕಲ್‌ ಎಲೆಕ್ಷನ್‌: ಅಂತಿಮ ಕಣದಲ್ಲಿ 151 ಅಭ್ಯರ್ಥಿಗಳು

ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ ಒಟ್ಟು 16 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, ಅಂತಿಮವಾಗಿ 151 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

Vijaya Karnataka 21 May 2019, 5:00 am
ಚಾಮರಾಜನಗರ: ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ ಒಟ್ಟು 16 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, ಅಂತಿಮವಾಗಿ 151 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
Vijaya Karnataka Web local election 151 candidates in the final
ಲೋಕಲ್‌ ಎಲೆಕ್ಷನ್‌: ಅಂತಿಮ ಕಣದಲ್ಲಿ 151 ಅಭ್ಯರ್ಥಿಗಳು


ಒಟ್ಟು 167 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿತ್ತು. ಈ ಪೈಕಿ 16 ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ಗುಂಡ್ಲುಪೇಟೆ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 9 ಅಭ್ಯರ್ಥಿಗಳು, ಯಳಂದೂರು ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ನಾಲ್ವರು ಅಭ್ಯರ್ಥಿಗಳು ಹಾಗೂ ಹನೂರು ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೂವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಒಟ್ಟಾರೆ ಗುಂಡ್ಲುಪೇಟೆ ಪುರಸಭಾ ಚುನಾವಣೆಗೆ 67 ಅಭ್ಯರ್ಥಿಗಳು, ಯಳಂದೂರು ಪಟ್ಟಣ ಪಂಚಾಯಿತಿಗೆ 43 ಅಭ್ಯರ್ಥಿಗಳು ಹಾಗೂ ಹನೂರು ಪಟ್ಟಣ ಪಂಚಾುತಿಗೆ 41 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ