ಆ್ಯಪ್ನಗರ

ಮೃತ ಅರಣ್ಯ ರಕ್ಷಕನ ಕುಟುಂಬಕ್ಕೆ ಸೂಕ್ತ ಪರಿಹಾರ ಭರವಸೆ: ಪ್ರತಿಭಟನೆ ವಾಪಸ್‌

ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ಅರಣ್ಯ ರಕ್ಷಕನ ಕುಟುಂಬಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸುವ ಭರವಸæ ನೀಡಿರುವ ಹಿನ್ನæ್ನಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Vijaya Karnataka 23 May 2019, 5:00 am
ಹನೂರು : ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ಅರಣ್ಯ ರಕ್ಷಕನ ಕುಟುಂಬಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸುವ ಭರವಸæ ನೀಡಿರುವ ಹಿನ್ನæ್ನಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
Vijaya Karnataka Web CHN-CHN22HNR1


ಹನೂರು ಕ್ಷೇತ್ರ ವ್ಯಾಪ್ತಿಯ ಕಾವೇರಿ ವನ್ಯಜೀವಿ ವಲಯದ ಪಾಲಾರ್‌ ರೇಂಜ್‌ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ಕೊಂಗನೂರು ಗ್ರಾಮದ ನಿವಾಸಿ ಹಲಗತಂಬಡಿ ಆನೆ ದಾಳಿಗೆ ಮೃತಪಟ್ಟ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದವರೆಗೆ ರೈತ ಸಂಘಟನೆ ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

''ಮರಣೋತ್ತರ ಪರೀಕ್ಷೆಗೆ ಮುನ್ನ ಅರಣ್ಯ ರಕ್ಷಕನ ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಕೊನೆಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೂಕ್ತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಟ್ಟಿದ್ದೇವೆ, ನಮ್ಮ ಬೇಡಿಕೆಯಂತೆ ಮೃತನ ಕುಟುಂಬದವರಿಗೆ ಅರಣ್ಯ ಇಲಾಖೆ ವತಿಯಿಂದ 5 ಲಕ್ಷ ರೂ. ಪರಿಹಾರ, 5 ವರ್ಷದವರೆಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಮೃತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ,'' ಎಂದು ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಒತ್ತಾಯ: ''ಮೃತ ಹಲಗತಂಬಡಿ ಕುಟುಂಬಕ್ಕೆ ಇನ್ನೂ ಹೆಚ್ಚಿನ ಪರಿಹಾರವನ್ನು ನೀಡಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ವಾಚರ್‌ ಹಾಗೂ ಸಿಬ್ಬಂದಿಗಳು ಇಂತಹ ಅವಘಡಗಳಿಗೆ ತುತ್ತಾದಾಗ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಲಾಗುವ 30 ಲಕ್ಷ ರೂ. ಪರಿಹಾರವನ್ನು ವಾಚರ್‌ ಹಾಗೂ ಸಿಬ್ಬಂದಿಗಳಿಗೆ ನೀಡಬೇಕು. ಅವರಿಗೂ ವಿಮೆ ಸೇರಿದಂತೆ ಜೀವನ ಭದ್ರತೆಯನ್ನು ಒದಗಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗೆ ಭದ್ರತೆ ಹಾಗೂ ರಕ್ಷ ಣೆಗೆ ನೀಡಲಾಗುವ ಶಸ್ತ್ರಾಸ್ತ್ರಗಳನ್ನು ಒದಗಿಸಬೇಕು. ಕಾಡು ಪ್ರಾಣಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಪ್ರಾಣ ರಕ್ಷ ಣೆ ಮಾಡಲು ತರಬೇತಿ ನೀಡಬೇಕು,'' ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಡಿಸಿಎಫ್‌ ಡಾ.ರಮೇಶ್‌ಕುಮಾರ್‌, ಎಸಿಎಫ್‌ಗಳಾದ ಆಶಿಸ್‌ರೆಡ್ಡಿ, ಅಂಕರಾಜು ಭೇಟಿ ನೀಡಿ, ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವುದಾಗಿ ರೈತ ಸಂಘಟನೆಯವರಿಗೆ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ರೈತ ಸಂಘಟನೆಯ ಮುಖಂಡರಾದ ಚಂಗಡಿ ಕರಿಯಪ್ಪ, ಕೆ.ವಿ.ಮಾದೇಶ್‌, ಆಣೆಹೊಲ ಮಾದೇವು, ಮೆದಗಾಣೆ ಮಾದಯ್ಯ, ಪುಟ್ಟಪ್ಪ, ತೊಳಸಿಕೆರೆ ಮಾದೇವಸ್ವಾಮಿ, ರೈತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ