ಆ್ಯಪ್ನಗರ

ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

ಪ್ರಜಾಪ್ರಭುತ್ವದ ಬಲವರ್ಧನೆಗಾಗಿ 18 ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಸಲಹೆ ನೀಡಿದರು.

Vijaya Karnataka 25 Jan 2019, 8:59 pm
ಚಾಮರಾಜನಗರ : ಪ್ರಜಾಪ್ರಭುತ್ವದ ಬಲವರ್ಧನೆಗಾಗಿ 18 ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಸಲಹೆ ನೀಡಿದರು.
Vijaya Karnataka Web participate actively in the voting
ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘‘ಚುನಾವಣೆ ಕುರಿತು ಎಷ್ಟೆ ಅಭಿಯಾನಗಳು, ಅರಿವು ಕಾರ‌್ಯಕ್ರಮಗಳಿಂದ ಯಾವುದೇ ಚುನಾವಣೆಯಲ್ಲಿಯೂ ಶೇ.100ಕ್ಕೆ 100 ಮತದಾನ ನಡೆದಿಲ್ಲ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಶೇಖಡಾವಾರು ಮತದಾನ ಗಮನಿಸಿದಾಗ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮತದಾನ ದಾಖಲಾದರೆ, ವಿದ್ಯಾವಂತರಿರುವ ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿದೆ. ಇದು ವಿಷಾದಕರ,’’ಎಂದರು.

‘‘ಮತದಾನವನ್ನು ವಿದ್ಯಾವಂತರು, ಯುವಜನತೆ ಗಂಭೀರವಾಗಿ ಪರಿಗಣಿಸಬೇಕು. ಸರಕಾರಿ ಅಧಿಕಾರಿಗಳು, ನೌಕರರು ಸಹ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅನುಕೂಲ ಮಾಡಿಕೊಡಬೇಕು. ಚುನಾವಣಾ ಶಾಖೆಯಲ್ಲಿ ಕಾರ್ಯನಿರ್ವಹಿಸುವವರು ಪರಿಪೂರ್ಣ ಜ್ಞಾನ ಹೊಂದಿರಬೇಕು. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳುವ ಯುವಕರು, ಜನಸಾಮಾನ್ಯರಿಗೆ ಸೂಕ್ತ ಮಾಹಿತಿ ನೀಡಿ ಹೆಸರು ನೊಂದಾುಸಿಕೊಳ್ಳಲು ಉತ್ತೇಜಿಸಬೇಕು,’’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ, ‘‘ಭಾರತ ಚುನಾವನಾ ಆಯೋಗ ಜಾರಿಯಾದ ಸುದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ದೇಶದ ಚುನಾವಣಾ ಅಯೋಗದಷ್ಟು ಸಮರ್ಪಕ ಕಾರ್ಯನಿರ್ವಹಣೆ ಇತರೆ ಯಾವುದೇ ರಾಷ್ಟ್ರದ ಚುನಾವಣೆಯಲ್ಲಿ ಕಾಣಸಿಗುವುದಿಲ್ಲ. ಮತದಾನದ ಕುರಿತು ಅರಿವು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಪಲ್ಸ್ ಪೊಲಿಯೋ ಅಭಿಯಾನದ ಮಾದರಿಯಲ್ಲಿ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ,’’ಎಂದರು.

‘‘ಜಿಲ್ಲೆಯಲ್ಲಿ ಈಗಾಗಲೇ 8. 29 ಲಕ್ಷ ಮತದಾರರನ್ನು ನೋಂದಾಯಿಸಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ 18 ವರ್ಷ ತುಂಬಿದ ಯುವ ಮತದಾರರನ್ನು ಸೇರ್ಪಡೆ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ,’’ ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ಕುಮಾರ್ ಮಾತನಾಡಿ, ‘‘ಜಗತ್ತಿನಲ್ಲೇ ಭಾರತ ಪರಿಪೂರ್ಣ, ಪ್ರಬುದ್ಧ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು ನಮ್ಮ ಹೆಮ್ಮೆ. ಮತದಾನ ಸಂಶಯದಿಂದ ಕೂಡಿರದೇ ನಂಬಿಕೆಯ ಪ್ರಕ್ರಿಯೆಯಾಗಬೇಕು. ನೈತಿಕ ಮತದಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರು ಅರಿತು ಮುನ್ನಡೆಯಬೇಕು,’’ ಎಂದರು.
ಪ್ರಾಚಾರ್ಯರಾದ ಗುಬ್ಬಿಗೂಡು ರಮೇಶ್ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಯುವ ಮತದಾರರಿಗೆ ಭಾವಚಿತ್ರ ಇರುವ ಗುರುತಿನ ಚೀಟಿಗಳನ್ನು ಮತ್ತು ವಿಕಲಚೇತನರಿಗೆ ಬ್ರೈನ್ ಲಿಪಿ ಮೂಲಕ ಮತದಾನ ಮಾಡಲು ಗುರುತಿನಚೀಟಿ ವಿತರಣೆ ಮಾಡಲಾಯಿತು. ಅಲ್ಲದೇ ಕಳೆದ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಷ್ಣಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ