ಆ್ಯಪ್ನಗರ

’ಪ್ರತ್ಯೇಕ ಲಿಂಗಾಯಿತ ಧರ್ಮದ ಕೂಗು ಸ್ವಾರ್ಥ ಸಾಧನೆಗಾಗಿ’

: ಸ್ವಾರ್ಥ ಸಾಧನೆಗಾಗಿ ಹಾಗೂ ರಾಜಕೀಯ ಬೆಳವಣಿಗೆಗಾಗಿ ಕೆಲವರು ಪ್ರತ್ಯೇಕ ಲಿಂಗಾಯಿತ ಧರ್ಮದ ಕೂಗನ್ನು ಎಬ್ಬಿಸಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ತಿಳಿಸಿದರು.

Vijaya Karnataka 13 Aug 2019, 5:00 am
ಚಾಮರಾಜನಗರ: ಸ್ವಾರ್ಥ ಸಾಧನೆಗಾಗಿ ಹಾಗೂ ರಾಜಕೀಯ ಬೆಳವಣಿಗೆಗಾಗಿ ಕೆಲವರು ಪ್ರತ್ಯೇಕ ಲಿಂಗಾಯಿತ ಧರ್ಮದ ಕೂಗನ್ನು ಎಬ್ಬಿಸಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ತಿಳಿಸಿದರು.
Vijaya Karnataka Web CHN-CHN12HM2


ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಸಭಾಂಗಣದಲ್ಲಿ ವೀರಶೈವ ಲಿಂಗಾಯಿತ ಮುಖಂಡರ ಜತೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

''1904ರಲ್ಲಿ ಹಾನಗಲ್‌ ಕುಮಾರಸ್ವಾಮಿ ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪನೆ ಮಾಡಿದರು, ಅಂದಿನಿಂದ ಇಂದಿನವರೆಗೂ ವೀರಶೈವ ಲಿಂಗಾಯತ ಎಂಬ ಭೇದ ಭಾವ ಪ್ರತ್ಯೇಕತೆ ಇರಲಿಲ್ಲ. ಆದರೆ ಕೆಲ ವ್ಯಕ್ತಿಗಳು ತಮ್ಮ ಸ್ವಾರ್ಥ ಸಾಧನೆ ಹಾಗೂ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಎತ್ತಿದ್ದಾರೆ. ಜಿಲ್ಲೆಯಲ್ಲಿ ವೀರಶೈವ ಲಿಂಗಾಯಿತರು ಉತ್ತಮ ಬಾಂಧವ್ಯ ಹೊಂದಿದ್ದು, ವೀರಶೈವ ಲಿಂಗಾಯತ ಪ್ರತ್ಯೇಕತೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದಿರುವುದು ಸಮಧಾನ ತಂದಿದೆ, ಎಲ್ಲರ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುವ ಅಗತ್ಯವಿದೆ,''ಎಂದರು.

ಸಭೆಯಲ್ಲಿನ ನಿರ್ಣಯಗಳು; ಸಂವಾದ ಕಾರ್ಯಕ್ರಮಕ್ಕೂ ಮೊದಲು ಬಿಳಿಗಿರಿರಂಗನಬೆಟ್ಟದ ಸುತ್ತೂರು ಶಾಖಾಮಠದ ಆವರಣದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭೆ ರಾಜ್ಯ ಕಾರ‍್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯದ 30 ಜಿಲ್ಲೆಗಳ ಪೈಕಿ 5 ಜಿಲ್ಲಾಘಟಕ, 88 ತಾಲೂಕು ಘಟಕ ಚುನಾವಣೆ ಮೂಲಕ ರಚನೆಯಾಗಿದ್ದು, ಉಳಿದ ಜಿಲ್ಲಾ, ತಾಲೂಕು ಘಟಕ ರಚನೆಗೆ ಪ್ರತಿ ಜಿಲ್ಲೆಯಲ್ಲೂ 1 ಸಾವಿರ ಸದಸ್ಯರನ್ನು ನೋಂದಾಯಿಸಲು ತೀರ್ಮಾನಿಸಲಾಯಿತು. ಬೆಂಗಳೂರು ಅಂತಾರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣ ಸಮೀಪದ ತಾರಹುಣಸೆಯಲ್ಲಿ ದಾನಿಗಳು ನೀಡಿರುವ ಜಾಗದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲು ಕಟ್ಟಡ ನಿಧಿ ಸಂಗ್ರಹ, ಪ್ರವಾಹ ಸಂತ್ರಸ್ಥರಿಗೆ ನೆರವಾಗಲು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳಿಂದ ದೇಣಿಗೆ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದು, ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯಿತ ಭವನ ನಿರ್ಮಾಣ ಮಾಡಲು ಜನಪ್ರತಿನಿಧಿಗಳ ಸಹಕಾರ ಕೋರಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಹರವೆ ವಿರಕ್ತಮಠದ ಸರ್ಪಭೂಷಣಸ್ವಾಮೀಜಿ, ಗೌಡಳ್ಳಿಮಠದ ಮರಿತೋಂಟದಾರ್ಯಸ್ವಾಮೀಜಿ, ಚಾಮರಾಜನಗರ ಸಿದ್ದಮಲ್ಲೇಶ್ವರಮಠದ ಚನ್ನಬಸವಸ್ವಾಮೀಜಿ, ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾಪ್ರಸನ್ನ, ಉಪಾಧ್ಯಕ್ಷ ಸಚ್ಚಿದಾನಂದ, ಪದಾಧಿಕಾರಿಗಳಾದ ಸಾಗರನಹಳ್ಳಿ ನಟರಾಜು, ವರುಣಾಮಹೇಶ್‌,

ಹಿನಕಲ್‌ ಬಸವರಾಜು, ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮಾಜಿ ಶಾಸಕಿ ಪರಿಮಳಾ ನಾಗಪ್ಪ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ