ಆ್ಯಪ್ನಗರ

ವೇತನಕ್ಕೆ ಒತ್ತಾಯಿಸಿ ನೀರುಗಂಟಿಗಳ ಪ್ರತಿಭಟನೆ

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ನೀರು ಗಂಟಿ ಹಾಗೂ ಇತರೆ ಸಿಬ್ಬಂದಿ ನಿಗದಿತ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Vijaya Karnataka 23 Jul 2019, 5:00 am
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ನೀರು ಗಂಟಿ ಹಾಗೂ ಇತರೆ ಸಿಬ್ಬಂದಿ ನಿಗದಿತ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
Vijaya Karnataka Web news/chamarajnagara/protest
ವೇತನಕ್ಕೆ ಒತ್ತಾಯಿಸಿ ನೀರುಗಂಟಿಗಳ ಪ್ರತಿಭಟನೆ


ಗ್ರಾಮ ಪಂಚಾಯಿತಿಯಲ್ಲಿ ನೀರು ಗಂಟಿ ಗಂಟಿಗಳಿಗೆ ನಿರ್ದಿಷ್ಟ ವೇತನ ನೀಡುವಂತೆ ಸರಕಾರ ಆದೇಶ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಈ ಹಿಂದೆ ಎರಡು ಬಾರಿ ಪಂಚಾಯಿತಿಗೆ ಮನವಿಯನ್ನು ಸಲ್ಲಿಸಿದ್ದೆವು. ಆದರೆ ಇದುವರೆಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಆದೇಶ ಹೊರಡಿಸಿರುವ ವೇತನ ನೀಡಲು ಗ್ರಾಮ ಪಂಚಾಯಿತಿ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೇವಲ ಎರಡು ಸಾವಿರ ವೇತನ ಮಾತ್ರ ನೀಡಲಾಗುತ್ತಿದೆ. ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಣ್ಣ ಮಾತನಾಡಿ, ಶೀಘ್ರದಲ್ಲೇ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದು ನಿರ್ದಿಷ್ಟ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ