ಆ್ಯಪ್ನಗರ

ಅನಾಮಧೇಯ ಕರೆ: ನಗರದ ರೈಲ್ವೆ ನಿಲ್ದಾಣದಲ್ಲಿ ತೀವ್ರ ಶೋಧ

ರೈಲ್ವೆ ನಿಲ್ದಾಣದಲ್ಲಿ ಬಾಂಬ್‌ ಇಡಲಾಗಿದೆ ಎಂಬ ಅನಾಮಧೇಯ ಕರೆ ಹಿನ್ನೆಲೆಯಲ್ಲಿ ಪೊಲೀಸರು ನಗರದ ರೈಲ್ವೆ ನಿಲ್ದಾಣದಲ್ಲೂ ಶುಕ್ರವಾರ ಬೆಳಗ್ಗೆ ವ್ಯಾಪಕ ಶೋಧ ಕಾರ್ಯ ನಡೆಸಿದರು.

Vijaya Karnataka 23 Feb 2019, 5:00 am
ಚಾಮರಾಜನಗರ : ರೈಲ್ವೆ ನಿಲ್ದಾಣದಲ್ಲಿ ಬಾಂಬ್‌ ಇಡಲಾಗಿದೆ ಎಂಬ ಅನಾಮಧೇಯ ಕರೆ ಹಿನ್ನೆಲೆಯಲ್ಲಿ ಪೊಲೀಸರು ನಗರದ ರೈಲ್ವೆ ನಿಲ್ದಾಣದಲ್ಲೂ ಶುಕ್ರವಾರ ಬೆಳಗ್ಗೆ ವ್ಯಾಪಕ ಶೋಧ ಕಾರ್ಯ ನಡೆಸಿದರು.
Vijaya Karnataka Web search at the railway station
ಅನಾಮಧೇಯ ಕರೆ: ನಗರದ ರೈಲ್ವೆ ನಿಲ್ದಾಣದಲ್ಲಿ ತೀವ್ರ ಶೋಧ


ಪೊಲೀಸ್‌ ಇಲಾಖೆ 100 ಸಂಖ್ಯೆಗೆ ಕರೆ ಮಾಡಿದ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದಲ್ಲಿ ಬಾಂಬ್‌ ಇಡಲಾಗಿದೆ ಎಂದು ಕರೆ ಮಾಡಿ, ಕಡಿತ ಮಾಡಿದ್ದ. ಇದನ್ನು ಲಘುವಾಗಿ ಪರಿಗಣಿಸಬಾರದೆಂಬ ಕಾರಣಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲ ರೈಲ್ವೆ ನಿಲ್ದಾಣಗಳನ್ನು ತಪಾಸಣೆಗೆ ಒಳಪಡಿಸುವಂತೆ ಸೂಚನೆ ನೀಡಿದ್ದರು.

ಹಾಗಾಗಿ ಶುಕ್ರವಾರ ಬೆಳಗ್ಗೆ ಪಟ್ಟಣ ಠಾಣೆ ಇನ್ಸ್‌ಪೆಕ್ಟರ್‌ ನಾಗೇಗೌಡ ಅವರು, ತಮ್ಮ ಸಿಬ್ಬಂದಿ ಹಾಗೂ ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಮುಂಜಾನೆ 4.30ರಿಂದ 7.30ರವರೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದರು. ಆದರೆ ಎಲ್ಲೂ ಬಾಂಬ್‌ ಇಟ್ಟಿರುವ ಸುಳಿವು ದೊರೆಯಲಿಲ್ಲ. ಹೀಗಾಗಿ ಇದು ಹುಸಿ ಕರೆ ಇರಬೇಕೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಿ ನಿಗಾವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ