ಆ್ಯಪ್ನಗರ

ಸಂತೇಮರಹಳ್ಳಿಯಲ್ಲಿ ಹಿರಿಯ ನಾಗರಿಕರ ದಿನಾಚಣೆ

ಸಂತೇಮರಹಳ್ಳಿ ಜ್ಞಾನ ಸಿಂಧೂ ವೃದ್ಧಾಶ್ರಮದಲ್ಲಿ ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗೌತಮ ಬುದ್ಧ ಸಾಂಸ್ಕೃತಿಕ ಕಲಾ ಕ್ರೀಡಾ ಸಂಘ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚಣೆ ನಡೆಯಿತು.

Vijaya Karnataka 31 Mar 2019, 5:00 am
ಸಂತೇಮರಹಳ್ಳಿ : ಸಂತೇಮರಹಳ್ಳಿ ಜ್ಞಾನ ಸಿಂಧೂ ವೃದ್ಧಾಶ್ರಮದಲ್ಲಿ ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗೌತಮ ಬುದ್ಧ ಸಾಂಸ್ಕೃತಿಕ ಕಲಾ ಕ್ರೀಡಾ ಸಂಘ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚಣೆ ನಡೆಯಿತು.
Vijaya Karnataka Web senior citizens day in santemarahalli
ಸಂತೇಮರಹಳ್ಳಿಯಲ್ಲಿ ಹಿರಿಯ ನಾಗರಿಕರ ದಿನಾಚಣೆ


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯೆ ಕಾರ್ಯದರ್ಶಿ ಸಿ.ಜೆ. ವಿಶಾಲಾಕ್ಷಿ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ''ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪೋಷಕರನ್ನು ಮನೆಯಿಂದ ಹೊರಗೆ ಹಾಕುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುದೆ. ಇದರಿಂದ ಊಟ ಬಟ್ಟೆ ಹಾಗೂ ಆಶ್ರಯಕ್ಕೋಸ್ಕರ ಹಿರಿಯ ನಾಗರಿಕರು ವೃದ್ದಾಶ್ರಮಗಳಲ್ಲಿ ಜೀವನ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಹಿರಿಯ ನಾಗರಿಕೋಸ್ಕರ ಆಶ್ರಯ ನೀಡುವ ನಿಟ್ಟಿನಲ್ಲಿ ಇತಂಹ ಆಶ್ರಮಗಳನ್ನು ಆರಂಭಿಸಿದೆ. ಇಲ್ಲಿ ಇರುವ ತಂದೆ ತಾಯಿಗಳು ಮನೆ ಹಾಗೂ ಮಕ್ಕಳ ಚಿಂತೆ ಬಿಟ್ಟು ನೆಮ್ಮದಿಯಿಂದ ಜೀವನ ಸಾಗಿಸಬೇಕು ಎಂದರು.

ಸಮಾಜ ಸೇವಕ ಬೇಡರಪುರ ಮಹದೇವಸ್ವಾಮಿ ಮಾತನಾಡಿ, ಸಂತೇಮರಹಳ್ಳಿ ಹೋಬಳಿ ಕೇಂದ್ರ ಸ್ಥಾನದಲ್ಲಿ ಕಳೆದ 10 ವರ್ಷ ಹಿಂದೆ ಜ್ಞಾನಸಿಂಧೂ ವೃದ್ಧಾಶ್ರಮವನ್ನು ಆರಂಭಿಸಲಾಗಿದೆ. ಇಲ್ಲಿಗೆ ಬರುವ ವೃದ್ದರಿಗೆ ಉಚಿತವಾಗಿ ಊಟ, ಬಟ್ಟೆ ಸೇರಿದಂತೆ ಎಲ್ಲ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಾಧನಾ ಸಂಸ್ಥೆ ನಿರ್ದೇಶಕ ಟಿ.ಜೆ. ಸುರೇಶ್‌, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ಎಸ್‌.ಸಿದ್ದರಾಮಪ್ಪ, ವೃದ್ಧಾಶ್ರಮದ ಮೇಲ್ವಿಚಾರಕಿ ಮಹದೇವಮ್ಮ ಹಾಜರಿದ್ದರು.

ಧಿ------------

ಸಿಎಚ್‌ಎನ್‌30ಎಸ್‌ಎಂಆರ್‌2

ಸಂತೇಮರಹಳ್ಳಿ ಜ್ಞಾನಸಿಂಧೂ ವೃದ್ಧಾಶ್ರದಲ್ಲಿ ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗೌತಮಬುದ್ದ ಸಾಂಸ್ಕೃತಿಕ ಕಲಾ ಕ್ರೀಡಾ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚಣೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯೆ ಕಾರ್ಯದರ್ಶಿ ಸಿ.ಜೆ. ವಿಶಾಲಾಕ್ಷಿ ಚಾಲನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ