ಆ್ಯಪ್ನಗರ

ಶಿವು ಉಪ್ಪಾರ್ ಹತ್ಯೆ ಖಂಡಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ನಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತ ಶಿವು ಉಪ್ಪಾರ್ ಹತ್ಯೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ಒಕ್ಕೂಟದ ಕಾರ‌್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

Vijaya Karnataka 29 May 2019, 9:27 pm
ಚಾಮರಾಜನಗರ : ಬೆಳಗಾವಿ ಜಿಲ್ಲೆಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ನಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತ ಶಿವು ಉಪ್ಪಾರ್ ಹತ್ಯೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ಒಕ್ಕೂಟದ ಕಾರ‌್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
Vijaya Karnataka Web CHN-CHN29P1


ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಆಜಾದ್ ಹಿಂದೂ ಸೇನೆ ಜಿಲ್ಲಾಧ್ಯಕ್ಷ ಎಂ.ಎಸ್.ಥ್ವಿರಾಜ್ ಅವರ ನೇತತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಗರಸಭೆ ಸದಸ್ಯ ಹಾಗೂ ಆಜಾದ್ ಹಿಂದೂ ಸೇನೆ ಅಧ್ಯಕ್ಷ ಎಂ.ಎಸ್.ಥ್ವಿರಾಜ್ ಮಾತನಾಡಿ, ‘‘ಬೆಳಗಾವಿ ಜಿಲ್ಲೆಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರಾಗಿದ್ದ ಶಿವು ಉಪ್ಪಾರ್ ಅವರನ್ನು ಗೋ ಸಾಗಣೆದಾರರು ಅಮಾನುಷವಾಗಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆದರೆ, ಇಡೀ ಪ್ರಕರಣವನ್ನು ರಾಜ್ಯ ಸಮ್ಮಿಶ್ರ ಸರಕಾರ ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಯತ್ನಿಸುತ್ತಿದೆ,’’ ಎಂದು ಆರೋಪಿಸಿದರು.

ಗೋ ಮಾಫಿಯಾ ಕೈವಾಡ: ಶಿವು ಉಪ್ಪಾರ್ ಮಾತನಾಡಿರುವ ವಿಡಿಯೋ ಸಂದೇಶದಲ್ಲಿ ತನಗೆ ಜೀವ ಭಯ ಇರುವ ಬಗ್ಗೆ ಹಾಗೂ ಗೋ ಮಾಫಿ ಯಾದಿಂದ ಬೆದರಿಕೆ ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದಲ್ಲದೆ ಕಳೆದ ಕಾಂಗ್ರೆಸ್ ಸರಕಾರದಲ್ಲೂ ಸಹ ರಾಜ್ಯಾದ್ಯಂತ 25ಕ್ಕೂ ಹೆಚ್ಚು ಹಿಂದೂಪರ ಸಂಘಟನೆಗಳ ಕಾರ‌್ಯಕರ್ತರನ್ನು ಗುರಿಯಾಗಿಸಿಕೊಂಡು ವ್ಯವಸ್ಥಿತ ರೀತಿಯಲ್ಲಿ ದಾಳಿ ಮಾಡಿ ಹತ್ಯೆ ಮಾಡಿರುವುದನ್ನು ಇಡೀ ರಾಜ್ಯವೇ ಗಮನಿಸಿದೆ. ಶಿವು ಉಪ್ಪಾರ್ ಹತ್ಯೆಯು ಸಹ ಇದೇ ರೀತಿಯಲ್ಲಿ ವ್ಯವಸ್ಥಿತ ಪಿತೂರಿ ಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು,’’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಶಿವರಾಜ್, ಸಿ.ಎ.ಬಸವಣ್ಣ, ಮಹದೇವಯ್ಯ, ರಾಘವೇಂದ್ರ ಮಾಜಿ ಸದಸ್ಯ ರಾಜೇಶ್‌ನಾಯಕ, ವಿಎಚ್‌ಪಿ ವಿಭಾಗ ಕಾರ್ಯದರ್ಶಿ ರಾ. ಸತೀಶ್, ಕೂಡ್ಲೂರು ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ಆಜಾದ್ ಹಿಂದೂ ಸೇನೆ ಗೌರವ ಅಧ್ಯಕ್ಷ ಸುಂದರ್‌ರಾಜ್, ನಗರ ಅಧ್ಯಕ್ಷ ಶಿವು ವಿರಾಟ್, ಚಂದ್ರಶೇಖರ್, ಚಂದ್ರಶೇಖರ್‌ರಾವ್, ಚಿಕ್ಕರಾಜು, ನಂಜುಂಡನಾಯಕ, ಚಾ.ಹ.ಶಿವರಾಜ್, ರಂಗಸ್ವಾಮಿ, ನೂರೊಂದುಶೆಟ್ಟಿ, ರಮೇಶ್‌ನಾಯಕ, ಮಹದೇವಪ್ರಸಾದ್, ನಾಗಣ್ಣ, ಆನಂದ ಭಗೀರಥ, ದ್ವಾರಕಿ, ಕಾರ್ತಿಕ್, ಬಂಗಾರು, ಮಹೇಶ್ ಕೆಟಿ, ನಟ, ಮಹೇಶ್, ವೆಂಕಿ, ಚೆಲುವರಾಜ್, ಮಾಧು, ರಾಚಪ್ಪ, ಶಶಿ, ಉಮೇಶ್, ಚೇತನ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ