ಆ್ಯಪ್ನಗರ

ಶ್ರೀ ಮಹದೇಶ್ವರ ದಾಸೋಹ ಭವನಕ್ಕೆ ಭೂಮಿಪೂಜೆ

ಸಂತೇಮರಹಳ್ಳಿ ಮಹದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ 50 ಲಕ್ಷ ರೂ. ವೆಚ್ಚದ ದಾಸೋಹ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ನಂಜನಗೂಡು ಮಲ್ಲನಮೂಲೆ ಮಠಾಧ್ಯಕ್ಷ ಶ್ರೀ ಚನ್ನಬಸವಸ್ವಾಮೀಜಿ ಹಾಗೂ ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ಶ್ರೀ ಶಿವಕುಮಾರ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿದರು.

Vijaya Karnataka 20 Nov 2018, 5:00 am
ಸಂತೇಮರಹಳ್ಳಿ : ಸಂತೇಮರಹಳ್ಳಿ ಮಹದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ 50 ಲಕ್ಷ ರೂ. ವೆಚ್ಚದ ದಾಸೋಹ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ನಂಜನಗೂಡು ಮಲ್ಲನಮೂಲೆ ಮಠಾಧ್ಯಕ್ಷ ಶ್ರೀ ಚನ್ನಬಸವಸ್ವಾಮೀಜಿ ಹಾಗೂ ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ಶ್ರೀ ಶಿವಕುಮಾರ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿದರು.
Vijaya Karnataka Web sri mahadeswara dhasoha bhavan
ಶ್ರೀ ಮಹದೇಶ್ವರ ದಾಸೋಹ ಭವನಕ್ಕೆ ಭೂಮಿಪೂಜೆ


ಚನ್ನಬಸವ ಸ್ವಾಮೀಜಿ ಮಾತನಾಡಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಶ್ರೀ ಮಹದೇಶ್ವರ ಸ್ವಾಮಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ದೇವಸ್ಥಾನದಲ್ಲಿ ಪ್ರತಿ ಅಮಾವಾಸ್ಯೆ ಹಾಗು ವಿಶೇಷ ದಿನಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷ ಭೀಮನ ಅಮಾವಾಸ್ಯೆ ದಿನದಿಂದು ಒಂದು ಲಕ್ಷ ಕ್ಕೂ ಹೆಚ್ಚು ಭಕ್ತರು ಸ್ವಾಮಿಯ ದರ್ಶನ ಪಡೆದು ಸಹಪಂಕ್ತಿ ಭೋಜನದಲ್ಲಿ ಭಾಗಿಯಾಗುತ್ತಾರೆ.

ಈ ಎಲ್ಲಾ ಭಕ್ತರಿಗೂ ಟ್ರಸ್ಟ್‌ ವತಿಯಿಂದ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇದರೊಟ್ಟಿಗೆ ದೇವಸ್ಥಾನ ಅವರಣದಲ್ಲಿ ಭಕ್ತಾಧಿಗಳ ನೆರವಿನೊಂದಿಗೆ ಸುಸಜ್ಜಿತ ದಾಸೋಹ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದ್ದು, ಇಂದು ದೇವಸ್ಥಾನದ ಆವರಣದಲ್ಲಿ ದಾಸೋಹ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಭವನ ನಿರ್ಮಾಣಕ್ಕೆ ನೆರವು ನೀಡುವವರು ಮಹದೇಶ್ವರ ದೇವಸ್ಥಾನ ಟ್ರಸ್ಟ್‌ನ ಬ್ಯಾಂಕ್‌ ಖಾತೆ : 64095006551 ಹಣಪಾವತಿ ಮಾಡಬೇಕು ಎಂದು ಟ್ರಸ್ಟ್‌ ಪದಾಧಿಕಾರಿಗಳು ಮನವಿ ಮಾಡಿದರು.

ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ರಾದ ಶ್ರೀ ಶಿವಕುಮಾರ ಸ್ವಾಮೀಜಿ, ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದ ಟ್ರಸ್ಟ್‌ನ ಪದಾಧಿಕಾರಿಗಳು, ಸಂತೇಮರಹಳ್ಳಿ ಹಾಗು ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ