ಆ್ಯಪ್ನಗರ

ಪರೀಕ್ಷಾ ಪೇ ಚರ್ಚಾ: ಪ್ರಧಾನಿ ಜತೆ ಚರ್ಚೆಗೆ ಚಾಮರಾಜನಗರ ಜಿಲ್ಲೆಯ ಇಬ್ಬರು ಆಯ್ಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ವಿದ್ಯಾರ್ಥಿಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಅದರಲ್ಲೂ ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಆತಂಕ ಪಡಬಾರದು ಎಂದು ಧೈರ್ಯ ತುಂಬಿಸುವ ಕಾಯಕದಲ್ಲಿ ತೊಡಗಿದ್ದಾರೆ.

Vijaya Karnataka Web 9 Jan 2020, 7:41 pm
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜ. 20 ರಂದು ನಡೆಸಿಕೊಡುವ ಸಂವಾದ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲ ಕಡೆಯಿಂದಲೂ ವಿದ್ಯಾರ್ಥಿಗಳ ಆಯ್ಕೆ ನಡೆಯುತ್ತಿದೆ.
Vijaya Karnataka Web ಅಪೂರ್ವ, ಅರ್ಫತ್


ಕರ್ನಾಟಕದ ಗಡಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಜತೆ ಚರ್ಚೆ ಮಾಡಲು ಆಯ್ಕೆಯಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಆದರ್ಶ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಹಾಗೂ ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಆದರ್ಶ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಅರ್ಫತ್ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಇಬ್ಬರು ವಿದ್ಯಾರ್ಥಿಗಳು ಜ.16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 20ರಂದು ಪ್ರಧಾನಿಯೊಂದಿಗೆ ನಡೆಯಲಿರುವ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಡಿಯೋ ಕಾನ್ಪೆರೆನ್ಸ್ ಮೂಲಕ ಈ ಚರ್ಚೆ ನಡೆಯಲಿದೆ. ಅಪೂರ್ವ ಸೇನೆಯಲ್ಲಿ ವೈದ್ಯೆಯಾಗುವ ಕುರಿತು ಪ್ರಬಂಧ ಬರೆದಿದ್ದರೇ, ಅರ್ಫತ್ ಎಕ್ಸಾಂ ಮತ್ತು ಎಕ್ಸಾಮಿಂಗ್ ವಿಷಯದ ಕುರಿತು ಪ್ರಬಂಧ ಬರೆದಿದ್ದರು‌‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ