ಆ್ಯಪ್ನಗರ

‘ಆರೋಪ ಸತ್ಯಕ್ಕೆ ದೂರ’

ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ನನ್ನ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು ಎಂದು ಅದೇ ಗ್ರಾಮದ ರೈತ ಶಿವಪ್ಪ ಸ್ಪಷ್ಟಪಡಿಸಿದ್ದಾರೆ.

Vijaya Karnataka 7 Oct 2018, 5:00 am
ಚಾಮರಾಜನಗರ: ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ನನ್ನ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು ಎಂದು ಅದೇ ಗ್ರಾಮದ ರೈತ ಶಿವಪ್ಪ ಸ್ಪಷ್ಟಪಡಿಸಿದ್ದಾರೆ.
Vijaya Karnataka Web the allegation is far away from the truth
‘ಆರೋಪ ಸತ್ಯಕ್ಕೆ ದೂರ’


ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ಮೂವರು ಸಹ ನನ್ನ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಸರ್ವೇ ನಂ. 33ರ 4 ಎಕರೆ ಭೂಮಿಯು 1973ರಿಂದಲೂ ನನ್ನ ಅನುಭವದಲ್ಲಿದ್ದು, ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇನೆ. ಹೀಗಿರುವಾಗ ಒಂದು ಕುಟುಂಬವು ಅವರ ಜಮೀನನ್ನು ಅತಿಕ್ರಮಿಸಿಕೊಂಡು, ಕಿರುಕುಳ ನೀಡುತ್ತಿದ್ದಾರೆ ಎಂದು ನನ್ನ ಹಾಗೂ ಇತರೆ ಮೂವರ ಮೇಲೆಯೇ ಆರೋಪ ಮಾಡಿರುವುದು ಸರಿಯಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಅವರು ತೋರಿಸಲಿ. ಜಮೀನು ಯಾರ ಹೆಸರಿನಲ್ಲಿದೆ ಎಂಬುದನ್ನು ಸಂಬಂಧಪಟ್ಟವರು ಗಮನಿಸಲಿ,'' ಎಂದು ಸವಾಲು ಹಾಕಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ