ಆ್ಯಪ್ನಗರ

ಅಭಿವೃದ್ಧಿ ಕಾಮಗಾರಿ ತ್ವರಿತಕ್ಕೆ ತಾಕೀತು

​​ಜಿಲ್ಲೆಯಲ್ಲಿಕೈಗೆತ್ತಿಕೊಂಡಿರುವ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸು ವಂತೆ ಜಿಲ್ಲಾಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 6 Nov 2019, 5:00 am
ಚಾಮರಾಜನಗರ: ಜಿಲ್ಲೆಯಲ್ಲಿಕೈಗೆತ್ತಿಕೊಂಡಿರುವ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸು ವಂತೆ ಜಿಲ್ಲಾಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web suresh kumar new cut


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಾನಾ ಭಾಗಗಳಲ್ಲಿಆರಂಭಿಸ ಲಾಗಿರುವ ಪ್ರವಾಸಿ, ಧಾರ್ಮಿಕ ತಾಣಗಳ ಅಭಿವೃದ್ಧಿ ಕಾಮಗಾರಿ ಮಾಹಿತಿ ಪಡೆದ ಸಚಿವರು, ಕೆಲವೆಡೆ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳದಿ ರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

''ಜಿಲ್ಲೆಯು ಅತ್ಯುತ್ತಮ ಪ್ರವಾಸಿ ತಾಣ ಗಳನ್ನು ಹೊಂದಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಹೆಚ್ಚಿನ ಅವಕಾಶಗಳು ಇವೆ. ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಇತರೆ ವ್ಯವಸ್ಥೆಗಳನ್ನು ಕಲ್ಪಿಸುವುದು ಆದ್ಯತೆ ಆಗಬೇಕಿದೆ,'' ಎಂದರು.

ಏನೇನು ಆಗಬೇಕು:
ಧಾರ್ಮಿಕ ಹಾಗೂ ಇತರೆ ಪ್ರವಾಸಿ ತಾಣಗಳ ಬಗ್ಗೆ ಪರಿಚಯ ಮಾಡಿಕೊಡುವಂತಹ ವಿಭಿನ್ನ ಕಾರ‍್ಯಕ್ರಮಗಳನ್ನು ಆಯೋಜನೆ ಮಾಡಬೇಕು. ರೋಡ್‌ ಶೋ, ಸಾಹಸ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರಕಾರಗಳ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ರೂಪುರೇಷೆ ತಯಾರಿಸಬೇಕು, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯೊಂದನ್ನು ರೂಪಿಸಲು ಸಚಿವರು ಸೂಚನೆ ನೀಡಿದರು.

ಇದೇ ವೇಳೆ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಡಿಎಫ್‌ಒ ಏಡುಕೊಂಡಲು, ಭರಚುಕ್ಕಿ ಪ್ರದೇಶದಲ್ಲಿನಿರ್ಮಾಣ ಮಾಡಲು ರೂಪಿಸಿರುವ ಬಯೋ ಡೈವರ್ಸಿಟಿ ಪಾರ್ಕ್ ಪ್ರಸ್ತಾವನೆ ಕುರಿತು ಪವರ್‌ ಪಾಯಿಂಟ್‌ ಪ್ರದರ್ಶನದ ಮೂಲಕ ವಿವರಿಸಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ದನ್‌ ಪ್ರವಾಸಿ ಅಭಿವೃದ್ಧಿ ಕಾಮಗಾರಿ ಕುರಿತು ಸಭೆಗೆ ವಿವರ ನೀಡಿದರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌, ಜಿಲ್ಲಾಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್‌.ನಾರಾಯಣರಾವ್‌, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ ಕುಮಾರ್‌, ಉಪ ವಿಭಾಗಾಧಿಕಾರಿ ನಿಖಿತಾ. ಎಂ.ಚಿನ್ನಸ್ವಾಮಿ ಮತ್ತಿತ್ತರರು ಸಭೆಯಲ್ಲಿಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ